ತೆಂಗಿನ ನಾರಿನ ಉತ್ಪನ್ನಗಳ ತಯಾರಿಕೆ ತರಬೇತಿ
ಉಡುಪಿ: ಇಲ್ಲಿನ ನಿಟ್ಟೂರಿನಲ್ಲಿರುವ ಸ್ತ್ರೀ ಸೇವಾ ನಿಕೇತನ (ಸ್ಟೇಟ್ ಹೋಂ) ನಲ್ಲಿ ಇತ್ತೀಚೆಗೆ ರಾಜ್ಯ ತೆಂಗಿನನಾರಿನ ಅಭಿವೃದ್ಧಿ ನಿಗಮ, ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ನಡೆದ ತೆಂಗಿನ ನಾರಿನ ಉತ್ಪನ್ನಗಳ ತಯಾರಿಕಾ ತರಬೇತಿಯನ್ನು ಶಾಸಕ ಪ್ರಮೋದ್ ಮಧ್ವರಾಜ್ ಉದ್ಘಾಟಿಸಿದರು. ಉಡುಪಿ ಜಿಪಂ ಕೃಷಿ ಮತ್ತು ಕೈಗಾರಿಕಾ ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪಿ. ನಾಗೇಶ, ಜಿಪಂ ಅಧ್ಯಕ್ಷ ಉಪೇಂದ್ರ ನಾಯಕ್, ನಿಟ್ಟೂರು ವಾರ್ಡ್ನ ನಗರಸಭಾ ಸದಸ್ಯೆ ರಶ್ಮಿತಾ ಬಿ. ಶೆಟ್ಟಿ ಉಪಸ್ಥಿತರಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಕೈಗಾರಿಕಾ ಉತ್ತೇಜನಾಧಿಕಾರಿ ಎಸ್.ಎಚ್. ಮಹೇಶ್ವರಪ್ಪ ಸ್ವಾಗತಿಸಿದರು. ನಿಲಯ ಅಧೀಕ್ಷಕಿ ಮೂಕಾಂಬಿಕಾ ವಂದಿಸಿದರು.