ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಬಂಟಕಲ್ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Rashmi Kasaragodu
Updated On : 30 Apr 2014, 1:01 am

ಉಡುಪಿ: ಇಲ್ಲಿನ ಬಂಟಕಲ್ ಶ್ರೀ ಮಧ್ವವಾದಿರಾಜ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಾಜಿ ಮತ್ತು ಮ್ಯಾನೇಜ್  ಮೆಂಟ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಘಟಕ, ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆ ಮತ್ತು ಮೂಡುಬೆಳ್ಳೆ ಜೆಸಿಐ ಆಶ್ರಯದಲ್ಲಿ ರಕ್ತದಾನ ಶಿಬಿರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಒಟ್ಟು 183 ಯುನಿಟ್ ರಕ್ತವನ್ನು ಸಂಸ್ಥೆಯ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಜೇಸಿಐ ಸದಸ್ಯರಿಂದ ಸಂಗ್ರಹಿಸಲಾಯಿತು.  ಸಂಸ್ಥೆಯ ಪ್ರಾಂಶುಪಾಲ ಡಾ. ರಾಧಾಕೃಷ್ಣ ಎಸ್. ಐತಾಳ್ ಸ್ವತಃ ರಕ್ತದಾನ ಮಾಡುವುದರೊಂದಿಗೆ ಶಿಬಿರವನ್ನು ಉದ್ಘಾಟಿಸಿದರು. ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ರತ್ನಕುಮಾರ್, ಕೆಎಂಸಿಯ ರಕ್ತನಿಧಿ ನಿರ್ದೇಶಕಿ ಡಾ. ಸುಧಾ ಭಟ್ ಮತ್ತು ಜೇಸಿಐನ ಸಂತೋಷ್ ಕುಮಾರ್ ಮೂಡುಬೆಳ್ಳೆ ಉಪಸ್ಥಿತರಿದ್ದರು.
ಎನ್‌ಎಸ್‌ಎಸ್, ರೆಡ್‌ಕ್ರಾಸ್ ಘಟಕದ ಅಧಿಕಾರಿಗಳಾದ ಪ್ರಶಾಂತ್ ಎಂ.ಡಿ., ಆದಿತ್ಯ ಕುಡ್ವ ಮತ್ತು ರಾಮಮೂರ್ತಿ ಶಿಬಿರವನ್ನು ಸಂಯೋಜಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement