ಉಡುಪಿ

5 ಗ್ರಾ.ಪಂ.ಗಳನ್ನು ಸೇರಿಸಿ ಗ್ರೇಟರ್ ಉಡುಪಿ: ಸೊರಕೆ

ಮಣಿಪಾಲ: ಉಡುಪಿ ನಗರಸಭೆ ಸರಹದ್ದಿನಲ್ಲಿರುವ ಬಡಗಬೆಟ್ಟು, ಉದ್ಯಾವರ, ಕಡೆಕಾರು, ಅಲೆವೂರು, ಅಂಬಲಪಾಡಿ ಗ್ರಾಪಂಗಳನ್ನು ಉಡುಪಿ ನಗರಸಭೆಗೆ ಸೇರಿಸಿ 'ಗ್ರೇಟರ್ ಉಡುಪಿ' ರಚನೆ ಸಂಬಂಧ ಎಲ್ಲಾ ಮೂಲ ಸೌಕರ್ಯ ಹಾಗೂ ಅನುದಾನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದ ಗ್ರೇಟರ್ ಉಡುಪಿ ಸಂಬಂಧ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಈಗಾಗಲೇ ಉಡುಪಿ ಅಭಿವೃದ್ಧಿಗೆ ಕುಡ್ಸೆಂಪ್‌ನಿಂದ ರು. 85 ಕೋಟಿ, ನಗರೋತ್ಥಾನದಡಿ ರು. 30 ಕೋಟಿ ಬಿಡುಗಡೆಯಾಗಿದೆ.
ಬ್ರಹ್ಮಾವರ ಮತ್ತು ಕಾಪು ಗ್ರಾಪಂಗಳನ್ನು ಪುರಸಭೆ ಮಟ್ಟಕ್ಕೇರಿಸುವ ಪ್ರಸ್ತಾವನೆ ಸರ್ಕಾರದ ಮಟ್ಟದಲ್ಲಿ ಪರಿಶೀಲನೆಯಲ್ಲಿದೆ. ಅಭಿವೃದ್ಧಿಗೆ ಸರ್ಕಾರದಲ್ಲಿ ಅನುದಾನದ ಕೊರತೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಉಡುಪಿ ನಗರಸಭೆ ಅಧ್ಯಕ್ಷ ಯುವರಾಜ್ ಅವರು, ಸಿಬ್ಬಂದಿ ಕೊರತೆ ಮತ್ತು ನಿರ್ವಹಣೆ ಸಂಬಂಧ ಎತ್ತಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಈಗಾಗಲೇ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದ್ದು, ಮುಂದಿನ ಹಂತದಲ್ಲಿ ನಗರಸಭೆಗಳಲ್ಲಿ ಖಾಲಿ ಹುದ್ದೆ ಭರ್ತಿಮಾಡಲಾಗುವುದು, ಹಂತ ಹಂತವಾಗಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್, ಅಪರ ಜಿಲ್ಲಾಧಿಕಾರಿ ಕುಮಾರ್, ನಗರಸಭಾ ಉಪಾಧ್ಯಕ್ಷೆ ಅಮೃತಾ ಕೃಷ್ಣಮೂರ್ತಿ, ನಗರಸಭಾ ಆಯುಕ್ತ ಶ್ರೀಕಾಂತ್, ಯೋಜನಾ ನಿರ್ದೇಶಕ ಪ್ರಸನ್ನ, ಜಿಪಂ ಪ್ರಭಾರ ಅಧ್ಯಕ್ಷ ಉದಯ ಕೋಟ್ಯಾನ್, ಮಾಜಿ ಅಧ್ಯಕ್ಷ ಉಪೇಂದ್ರ ನಾಯಕ್  ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿರೋಧ ಪಕ್ಷದ ಗದ್ದಲದ ನಡುವೆ ಸಂಸತ್ತಿನಲ್ಲಿ ಮೋದಿ ಸರ್ಕಾರದಿಂದ ಡೀಲಿಮಿಟೇಷನ್ ಮಸೂದೆಗೆ ಮರು ಜೀವ?

ರಾಜ್ಯಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ಗೆ ದೊಡ್ಡ ಹೊಡೆತ: ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು!

'ಟ್ರಬಲ್ ಶೂಟರ್‌' ಡಿಕೆಶಿ​ಗೆ ಖಾತೆ ಹಂಚಿಕೆ ಟ್ರಬಲ್: ಹೈಕಮಾಂಡ್‌ ಭೇಟಿಗಾಗಿ ದೆಹಲಿಗೆ ಹಾರಿದ ಸಚಿವ ಕೃಷ್ಣ ಬೈರೇಗೌಡ

'ಅಟ್ರಾಕ್ಟಿವ್ ಹುಡುಗಿಯರ ಕಡೆಗೆ ಆಕರ್ಷಿತನಾಗಿದ್ದೇನೆ, ಆದ್ರೂ...' : ಸುದೀರ್ಘ ದಾಂಪತ್ಯದ ರಹಸ್ಯ ಬಿಚ್ಚಿಟ್ಟ ಆರ್. ಮಾಧವನ್

ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ: ನಮ್ಮ ಮೆಟ್ರೋಗೆ ಭಾರೀ ನಷ್ಟ; ಸಾಲ ಮರುಪಾವತಿ ಹೊರೆ ಹೆಚ್ಚಳ!

SCROLL FOR NEXT