ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಧರ್ಮಸ್ಥಳ: ಬಾಹುಬಲಿಗೆ ಪಾದಾಭಿಷೇಕ

Lingaraj Badiger
Updated On : 5 Feb 2014, 11:30 am

ಬೆಳ್ತಂಗಡಿ: ಧರ್ಮಸ್ಥಳದ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಮಂಗಳವಾರ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಿತು.
 ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಡಿ. ರಾಜೇಂದ್ರ ಕುಮಾರ್ ಪಾದಾಭಿಷೇಕದಲ್ಲಿ ಭಾಗವಹಿಸಿದರು.
 ಕಾರ್ಕಳದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಬಾಹುಬಲಿ ಸಾಧಿಸಿ ತೋರಿಸಿದ ಅಹಿಂಸೆ, ಸುಖ, ತ್ಯಾಗದಿಂದ ಶಾಂತಿ ಎಂಬ ತತ್ತ್ವವು ವಿಶ್ವಮಾನ್ಯವಾಗಿದ್ದು, ಎಲ್ಲ ಸಮಸ್ಯೆಗಳನ್ನು ಇದರಿಂದ ಪರಿಹರಿಸಬಹುದು ಎಂದರು.
 ಭಗವಂತನಲ್ಲಿರುವ ಅನಂತ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸುವುದೇ ದೇವರ ಪೂಜೆಯ ಉದ್ದೇಶವಾಗಿದೆ. ಧಾರ್ಮಿಕರಿದ್ದಲ್ಲಿ ಮಾತ್ರ ಧರ್ಮವಿರುತ್ತದೆ. ನಾವು ಧರ್ಮವನ್ನು ರಕ್ಷಿಸಿದರೆ ಧರ್ಮ ನಮ್ಮನ್ನು ಕಾಪಾಡುತ್ತದೆ ಎಂದು ಹೇಳಿದರು. ನರಸಿಂಹರಾಜಪುರ ಬಸ್ತಿ ಮಠದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ ಆಶೀರ್ವಚನ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement