ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಪ್ರತ್ಯೇಕ ಮಟ್ಕಾಜುಗಾರಿ ಪ್ರಕರಣ: ಇಬ್ಬರ ಬಂಧನ

Lingaraj Badiger
Updated On : 5 Feb 2014, 11:29 am

ಕುಂದಾಪುರ: ಮಟ್ಕಾ ಜುಗಾರಿ ಆಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಕಸಬಾ ಗ್ರಾಮದ ಹೊಟೇಲೊಂದರ ಬಳಿ ಸೋಮವಾರ ನಡೆದಿದೆ. ಆರೋಪಿ ಶಂಕರ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಕುಂದಾಪುರ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆಟಕ್ಕೆ ಬಳಸಿದ ನಗದು ರು. 1,120 ಹಾಗೂ ಇತರ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಕುಂದಾಪುರ ನೂತನ ಬಸ್ ನಿಲ್ದಾಣದ ಹಣ್ಣು ತಳ್ಳು ಗಾಡಿಯ ಬಳಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಸೋಮವಾರ ನಡೆದಿದೆ. ಬಂಧಿತ ಶೇಖ್ ಅಬ್ದುಲ್ಲಾ. ಇವರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಎರಡು ಪ್ರಕರಣ ಕುಂದಾಪುರ ಠಾಣೆಯಲ್ಲಿ ದಾಖಲಾಗಿದೆ.
ಲಾರಿ ಡಿಕ್ಕಿ; ಪಾದಚಾರಿ ಗಾಯ
ಕುಂದಾಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದು, ವ್ಯಕ್ತಿ ಗಾಯಗೊಂಡ ಘಟನೆ ತಲ್ಲೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ಗಾಯಗೊಂಡವರನ್ನು ಮಂಜ ಎಂದು ಗುರುತಿಸಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಆತ್ಮಹತ್ಯೆ
ಉಡುಪಿ: ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕೆಳಬೆಳಂಜಾಲೆ ಮಟ್ಟಾರು ಎಂಬಲ್ಲಿ ಸೋಮವಾರ ನಡೆದಿದೆ. ಮೃತರು ಶ್ರೀನಿವಾಸ ನಾಯಕ್. ಇವರಿಗೆ ಮಾನಸಿಕ ಕಾಯಿಲೆ ಇದ್ದು, ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಾಯಿಲೆ ಗುಣಮುಖವಾಗದ ಕಾರಣ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ಆತ್ಮಹತ್ಯೆ
ಕುಂದಾಪುರ:  ಇಲ್ಲಿನ ಕೋಟೇಶ್ವರ ಗ್ರಾಮದ ಮೆಜಿಸ್ಟಿಕ್ ಹಾಲ್‌ನಲ್ಲಿ ಕಳೆದ 10 ವರ್ಷಗಳಿಂದ ಕೆಲಸಕ್ಕಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಸಂತೋಷ್ ಎನ್.ಜಿ. (27) ಮೃತರು. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನರಸಿಂಹಪುರದ ನಿವಾಸಿ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹಾಲ್‌ನ ಮಾಲೀಕ ಇರ್ಷಾದ್ ಅಹಮ್ಮದ್ ಮಂಗಳವಾರ ಬೆಳಗ್ಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.  ಪ್ರದೀಪ ಎಂಬವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳೆ ಆತ್ಮಹತ್ಯೆ
ಅಮಾಸೆಬೈಲು: ಇಲ್ಲಿನ ಶೇಡಿಮನೆ ಗ್ರಾಮದ ಕೆಸ್ಕರಜೆಡ್ಡು ಎಂಬಲ್ಲಿ ಮಹಿಳೆಯೊಬ್ಬರು ಮಗಳ ಸಾವಿನ ನೋವು ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತರು ರತ್ನಾವತಿ ಶೆಟ್ಟಿ (60). ಇವರ ಮಗಳು ಆಶಾಲತಾ ಸುಮಾರು 3 ತಿಂಗಳ ಹಿಂದೆ ಕೇರಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ತಾಯಿ ರತ್ನಾವತಿ ಶೆಟ್ಟಿ ಮಾನಸಿಕವಾಗಿ ತೀವ್ರ ನೊಂದಿದ್ದರು. ಇದೇ ಕಾರಣಕ್ಕೆ ಮಂಗಳವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಗ ರಾಮಚಂದ್ರ ಶೆಟ್ಟಿ ದೂರಿನಂತೆ ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement