ಜಿಲ್ಲಾ ಬಿಜೆಪಿ ಗಣರಾಜ್ಯೋತ್ಸವ
ಉಡುಪಿ: ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ರಾಷ್ಟ್ರ ಧ್ವಜಾರೋಹಣ ಮಾಡುವುದರ ಮೂಲಕ 65ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್, ಪಕ್ಷದ ಪ್ರಧಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ಸಂಧ್ಯಾ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.