ಕಾರ್ಕಳ: ಜಾನಪದ ಸಾಂಸ್ಕೃತಿಕ ಸಂಜೆ
ಕಾರ್ಕಳ: ಇಲ್ಲಿನ ನಂದಳಿಕೆ ಕವಿ ಮುದ್ದಣ ರಂಗ ಮಂದಿರದಲ್ಲಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಕತ್ವದಲ್ಲಿ ಶ್ರೀ ಮಹಾಗಣಪತಿ ಆರ್ಟ್ಸ್ ಆ್ಯಂಡ್ ಕಲ್ಚರಲ್ ಫೌಂಡೇಶನ್ ವತಿಯಿಂದ ಜಾನಪದ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಅಂಕುಶ್ ಉದ್ಘಾಟಿಸಿದರು. ಉದ್ಯಮಿ ಸುಹಾಸ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಫೌಂಡೇಶನ್ನ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಇದ್ದರು. ಸಂಸ್ಥೆಯ ಯಕ್ಷಗಾನ ಕಲಾವಿದರಿಂದ ಯಕ್ಷಗಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರ ಪ್ರದೇಶದ ಬುಡಕಟ್ಟು ಕಲಾವಿದರಿಂದ ನೃತ್ಯ ಕಾರ್ಯಕ್ರಮ ನಡೆಯಿತು.