ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

23ರಂದು ಇಂಟರ್‌ಸಿಟಿ ರೈಲಿಗೆ ಸ್ವಾಗತ

Mainashree
Updated On : 18 Feb 2014, 11:35 am

ಉಡುಪಿ:  2013 - 14ನೇ ರೇಲ್ವೆ ಬಜೆಟಿನಲ್ಲಿ ಮಂಜೂರಾದ ನಂ. 22636 ಮಂಗಳೂರು - ಮಡ್ಗಾಂವ್ ಇಂಟರ್‌ಸಿಟಿ ರೈಲು 23ರಂದು ಸಂಚಾರ ಆರಂಭಿಸಲಿದೆ. ಉಡುಪಿ ರೇಲ್ವೆ ಯಾತ್ರಿ ಸಂಘ ಆ ದಿನ ಮಧ್ಯಾಹ್ನ ಉಡುಪಿ ರೈಲು ನಿಲ್ದಾಣದಲ್ಲಿ ಶಾಸಕ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ 3ಕ್ಕೆ ಸಂಭ್ರಮಾಚರಣೆ ನಡೆಸಲಿದೆ ಎಂದು ಸಂಘದ ಅಧ್ಯಕ್ಷ ಆರ್. ಎಲ್. ಡಾಯಸ್ ತಿಳಿಸಿದ್ದಾರೆ.
ಮಾ.2ರಂದು ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕೋತ್ಸವ
ಗಂಗೊಳ್ಳಿ: ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್‌ನ 30ನೇ ವಾರ್ಷಿಕೋತ್ಸವ ಸಮಾರಂಭ ಮಾ.2ರಂದು ಗಂಗೊಳ್ಳಿಯ ಕೆಎಫ್‌ಡಿಸಿ ವಠಾರದಲ್ಲಿ ನಡೆಯಲಿದೆ. ಉಡುಪಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟರ್ ವಿಶ್ವನಾಥ ಗಾಣಿಗ ಮತ್ತು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ 19 ವರ್ಷದೊಳಗಿನ ಟೆನ್ನಿಕಾಯ್ಟ್ ಆಟಗಾರ ಪ್ರಣಯ್ ಕುಮಾರ್ ಶೆಟ್ಟಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಮಾ. 1 ರಂದು ವಿದ್ಯಾರ್ಥಿ ವೇತನ ವಿತರಣೆ
ಗಂಗೊಳ್ಳಿ:  ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಪ್ರಾಯೋಜಿತ ಗುರುಜ್ಯೋತಿ ಶಿಕ್ಷಣನಿಧಿ ಯೋಜನೆಯ 13ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಾ. 1ರಂದು ಗಂಗೊಳ್ಳಿಯ ಕೆಎಫ್‌ಡಿಸಿ ವಠಾರದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಹಂಗಾರಕಟ್ಟೆ ಶ್ರೀ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ.ಎಂ. ಮೋಹನ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿಗಳಾದ ದತ್ತಾನಂದ ಗಂಗೊಳ್ಳಿ, ಜಿ. ಮೆಹಬೂಬ್ ಮಂಗಳೂರು, ರವಿ ಟಿ. ನಾಯ್ಕ್ ಮುಂಬೈ, ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಉಪಾಧ್ಯಕ್ಷ ಮೋಹನ ಬಾನಾವಳಿಕಾರ್ ಪಾಲ್ಗೊಳ್ಳಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement