ದೈಹಿಕ ಶಿಕ್ಷಕ ವಿಶ್ವೇಶ್ವರ ಭಟ್ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ಇಲ್ಲಿನ ಸಮೀಪದ ಕುಂಬ್ರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವಿಶ್ವೇಶ್ವರ ಭಟ್ ಅವರು ಫೆ. 6ರಿಂದ 9 ರವರೆಗೆ ಮಂಗಳೂರಿನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದ ತ್ರಿವಿಧ ಜಿಗಿತ ಮತ್ತು ಉದ್ದ ಜಿಗಿತ (ಪ್ರಥಮ) ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಫೆ. 6 ರಿಂದ 9 ವರೆಗೆ ಮಂಗಳೂರಿನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಅವರು ಕೆಯ್ಯೂರು ಗ್ರಾಮದ ಪಳ್ಳತ್ತಡ್ಕ ನಾರಾಯಣ ಭಟ್ ಮತ್ತು ಸುಮತಿ ದಂಪತಿಯನರ ಪುತ್ರ.
ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಅಧ್ಯಾಪಕರು ಅಭಿನಂದನೆ ಸಲ್ಲಿಸಿದ್ದಾರೆ.