ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ರಾಜ್ಯ ಸರ್ಕಾರಿ ನೌಕರರಿಗೆ ಸಮಾನ ವೇತನಕ್ಕೆ ಒತ್ತಾಯ

Rashmi Kasaragodu
Updated On : 12 Jan 2014, 2:31 am

ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ನಿವೃತ್ತಿ ವೇತನ ಮತ್ತು ಸೌಲಭ್ಯ ಸಮಾನವಾಗಿ ಸಿಗಬೇಕು, ಕೇಂದ್ರ ಸರ್ಕಾರದ 7ನೇ ವೇತನ ಆಯೋಗ ರಾಜ್ಯಗಳ ಸರ್ಕಾರಿ ನಿವೃತ್ತ ನೌಕರರಿಗೂ ಅನ್ವಯವಾಗಬೇಕು ಎಂದು ರಾಜ್ಯ ಸರ್ಕಾರಿ ನಿವೃತ್ತ ನೌಕರರ ಉಡುಪಿ ಜಿಲ್ಲಾ ಸಂಘವು ಸರ್ಕಾರವನ್ನು ಆಗ್ರಹಿಸಿದೆ. ಇತ್ತೀಚೆಗೆ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ರಾಜ್ಯ ಸಂಘದ ಅಧ್ಯಕ್ಷ ಡಿ.ಎನ್. ಸಂಪತ್ ಅವರು ಅಖಿಲ ಭಾರತ ರಾಜ್ಯ ಸರ್ಕಾರಿ ನಿವೃತ್ತರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿರುವುದರಿಂದ ಅವರು ಈ ಆಗ್ರಹಗಳ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ವಿನಂತಿಸುವುದಕ್ಕೆ ಸಭೆಯಲ್ಲಿ ನಿರ್ಣಯಿಸಲಾಯಿತು. ಇತರ ರಾಜ್ಯಗಳು ನೀಡುತ್ತಿರುವಂತೆ ವೈದ್ಯಕೀಯ, ಅಂತ್ಯಕ್ರಿಯೆಗೆ ನೀಡುವ ಆರ್ಥಿಕ ಸಹಾಯವನ್ನು ವಯಸ್ಸಿಗೆ ತಕ್ಕಂತೆ ಹೆಚ್ಚಿಸುವಂತೆಯೂ ಆಗ್ರಹಿಸಲು ನಿರ್ಧರಿಸಲಾಯಿತು. ಸಂಘದ ಅಧ್ಯಕ್ಷ ಎಸ್.ಟಿ. ಕುಂದರ್ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ ತೋನ್ಸೆ, ಕೋಶಾಧಿಕಾರಿ ಬಿ. ಶಂಕರ ಕಾಮತ್ ಭಾಗವಹಿಸಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement