ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಪರ್ಯಾಯೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ

Rashmi Kasaragodu
Updated On : 14 Jan 2014, 1:37 am

ಮಣಿಪಾಲ: ದೇಶ ವಿದೇಶದಿಂದ ಲಕ್ಷಾಂತರ ಜನರು ಪಾಲ್ಗೊಳ್ಳುವ ಉಡುಪಿ ಪರ್ಯಾಯೋಯತ್ಸವದ ಯಶಸ್ಸಿಗಾಗಿ ಜಿಲ್ಲೆಯ ವಿವಿಧ ಇಲಾಖೆಗಳ ಸಮನ್ವಯ ಹಾಗೂ ಸಹಕಾರದ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರ್ಯಾಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಪರ್ಯಾಯೋತ್ಸವದ ಬಗ್ಗೆ ಜಿಲ್ಲಾಡಳಿತ ನಡೆಸಬೇಕಾದ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿ, ಈ ವ್ಯವಸ್ಥೆಗಳಲ್ಲಿ ಯಾವುದೇ ಲೋಪಗಳಾಗಬಾರದು ಎಂದರು.
ಸಿ.ಸಿ. ಕ್ಯಾಮೆರಾ ಅಳವಡಿಕೆ: ಎಸ್ಪಿ ಡಾ. ಬೋರಲಿಂಗಯ್ಯ ಮಾತನಾಡಿ, ಈಗಾಗಲೇ ಪರ್ಯಾಯೋತ್ಸವದ ಸುರಕ್ಷತೆಗಾಗಿ 45 ಸಿ.ಸಿ .ಕ್ಯಾಮರ, ಟಿ.ವಿ.ಗಳನ್ನು ಅಳವಡಿಸಲಾಗುವುದು, 1200 ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ನೆರೆಯ 3 ಜಿಲ್ಲೆಗಳಿಂದ ನಿಯೋಜಿಸಲಾಗಿದೆ, ಆರೋಗ್ಯ ಇಲಾಖೆ ಸಹಯೋಗದೊಂದಿಗೆ 3 ಆಂಬುಲೆನ್ಸ್ ನಿಯೋಜಿಸಲಾಗುತ್ತದೆ ಎಂದರು.
ನಗರಸಭೆ ಆಯುಕ್ತ ಶ್ರೀಕಾಂತ ರಾವ್, ಜಿಲ್ಲಾ ಆರೋಗ್ಯ ಇಲಾಖೆ, ಮೆಸ್ಕಾಂ, ಲೋಕೋಪಯೋಗಿ ಇಲಾಖೆ, ಅಧಿಕಾರಿಗಳು ಸಭೆಯಲ್ಲಿ ತಮ್ಮ ಇಲಾಖೆ ಕ್ರಮಗಳನ್ನು ವಿವರಿಸಿದರು.
ಜಿಲ್ಲಾಧಿಕಾರಿ ಡಾ. ಎಂ.ಟಿ. ರೇಜು, ಜಿ.ಪಂ. ಮು.ಕಾ.ನಿ.ಅಧಿಕಾರಿ ಎಸ್. ಎ. ಪ್ರಭಾಕರ ಶರ್ಮ ಹಾಗೂ ವಿವಿಧ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement