ಏಡ್ಸ್ ನಿಯಂತ್ರಣ ಘಟಕ ಸಂವಹನ ಕೇಂದ್ರ ಉದ್ಘಾಟನೆ
ಉಡುಪಿ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಆಶ್ರಯದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕದ ಮಾಹಿತಿ ಹಾಗೂ ಸಂವಹನ ಕೇಂದ್ರವನ್ನು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಉದ್ಘಾಟಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಚ್. ಅಶೋಕ, ಪ್ರಾಥಮಿಕ ಆರೋಗ್ಯ ಕೇಂದ್ರ ಬಿದ್ಕಲಕಟ್ಟೆಯ ಆಪ್ತ ಸಮಾಲೋಚಕ ದಿನೇಶ, ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸುಮಲತಾ ಶೆಟ್ಟಿ ಇದ್ದರು.