ಆರೋಗ್ಯ ಉಚಿತ ತಪಾಸಣೆ ಶಿಬಿರ
ಕಾರ್ಕಳ: ಮಾಳ ಗ್ರಾಮದ ಮಲ್ಲಾರು ಶ್ರೀ ಗುರುಕುಲ ಹಿ.ಪ್ರಾ. ಶಾಲೆಯಲ್ಲಿ ಇತ್ತೀಚೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾಳ ಪ್ರಾಥಮಿಕ ಆರೋಗ್ಯ ಕೇಂದ್ರ, ಕೆಎಂಸಿ ಮಣಿಪಾಲ, ಮಾಳ ಗ್ರಾ.ಪಂ. ವತಿಯಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು. ಗ್ರಾ.ಪಂ. ಅಧ್ಯಕ್ಷೆ ಲೀಲಾ ಪೂಜಾರಿ ಅಧ್ಯಕ್ಷತೆ ವಹಿಸಿದ್ದು, ಕಾರ್ಕಳ ತಾ.ಪಂ. ಅಧ್ಯಕ್ಷೆ ರಶ್ಮಿ ಶೆಟ್ಟಿ ಶಿಬಿರ ಉದ್ಘಾಟಿಸಿದರು.
ಕಾರ್ಕಳ ತಾಲೂಕು ಪಂಚಾಯಿತಿ ಸದಸ್ಯರಾದ ಸುಗುಣ ಸುವರ್ಣ, ಸುಜಿತ್ ಕುಮಾರ್ ಶೆಟ್ಟಿ, ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ ಡಾ. ನಾಗಭೂಷಣ ಉಡುಪ, ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಉಪಾಧ್ಯಕ್ಷ ಡಾ. ಜ್ಞಾನೇಶ್ ಕಾಮತ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಗಜಾನನ ಮರಾಠೆ, ಮುಖ್ಯ ಶಿಕ್ಷಕಿ ವಸಂತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಧಾಕರ್ ಶೆಟ್ಟಿ ಇದ್ದರು.
ವೈದ್ಯಾಧಿಕಾರಿ ಡಾ. ಪ್ರಕಾಶ್ ಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ ಪ್ರಾಸ್ತಾವಿಕ ಮಾತನಾಡಿದರು.
ಹಿರಿಯ ಆರೋಗ್ಯ ಸಹಾಯಕ ಶ್ರೀನಿವಾಸ ವಂದಿಸಿದರು, ಆರೋಗ್ಯ ಸಹಾಯಕ ವಸಂತ್ ಶೆಟ್ಟಿ ನಿರೂಪಿಸಿದರು. ಆರೋಗ್ಯ ತಪಾಸಣೆ ಶಿಬಿರದಲ್ಲ್ಲಿ ಸುಮಾರು 210 ಫಲಾನುಭವಿಗಳನ್ನು ಉಚಿತ ತಪಾಸಣೆ ಮಾಡಿ ಚಿಕಿತ್ಸೆ ನೀಡಲಾಯಿತು.