ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಮಂಗಳೂರು: ಕಟ್ಟಡ ಕಾರ್ಮಿಕರ ರ್ಯಾಲಿ ನಾಳೆ

Rashmi Kasaragodu
Updated On : 20 Jul 2014, 2:02 am

ಮಂಗಳೂರು: ಕಟ್ಟಡ ಕಾರ್ಮಿಕರ ಸೌಲಭ್ಯಗಳ ಕುಂದುಕೊರತೆಗಳ ನಿವಾರಣೆಗೆ ಸರ್ಕಾರದ ಗಮನ ಸೆಳೆಯಲು ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘ ವತಿಯಿಂದ ಜು. 21 ರಂದು ಬೆಂದೂರುವೆಲ್‌ನಲ್ಲಿ ಬೃಹತ್ ರ್ಯಾಲಿ ನಡೆಯಲಿದೆ. ಫಲಾನುಭವಿಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಧನಸಹಾಯ ಸಿಗದೆ ಇರುವುದರಿಂದ ಸುಮಾರು 3 ಲಕ್ಷ ಕಾರ್ಮಿಕರು ತಮ್ಮ ಸದಸ್ಯತ್ವ ನವೀಕರಿಸಿಲ್ಲ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ. ವಿಶ್ವನಾಥ್ ಶೆಟ್ಟಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ 2 ಮಕ್ಕಳ ಮದುವೆಗೆ ರು. 50 ಸಾವಿರ ಸಹಾಯಧನ ನೀಡಬೇಕಿತ್ತು. ಆದರೆ ಇಲ್ಲಿಯವರೆಗೆ ಸುಮಾರು 2 ಸಾವಿರ ಅರ್ಜಿಗಳು ಬಾಕಿಯುಳಿದಿದೆ ಎಂದರು. ಕಟ್ಟಡ ಕಾರ್ಮಿಕರ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಮಂಡಳಿ ಹಾಗೂ ಸರ್ಕಾರವನ್ನು ಎಚ್ಚರಿಸಲು ರ್ಯಾಲಿ ನಡೆಯಲಿದೆ. ಬೆಂದೂರ್‌ವೆಲ್‌ನ ಕಾರ್ಮಿಕರ ಕಚೇರಿಯೆದುರು ಪ್ರತಿಭಟನೆ ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಪುರಂದರ ಶೆಟ್ಟಿ, ಜಯಂತ್ ಪುತ್ರನ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಗಟ್ಟಿ, ಕಿರಣ್ ಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement