ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ಇಂದು
ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮಾನಸಿಕ ರೋಗಗಳ ವಿಭಾಗದ ವತಿಯಿಂದ ಜು. 20 ರಂದು ಡೆನ್ಶಿಯಲ್ ಸಭಾಂಗಣದಲ್ಲಿ ಸೈಕೊಸೊಮಾಟಿಕ್ ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ನಡೆಯಲಿದೆ. ಸಾಮಾನ್ಯ ವೈದ್ಯಕೀಯ ವ್ಯವಸ್ಥೆಯ ಸ್ಥಿತಿ. ಮನೋರೋಗದಲ್ಲಿನ ವೈದ್ಯಕೀಯ ವಿಜ್ಞಾನ, ಶಿಕ್ಷಣ, ಆರೋಗ್ಯದ ಸುಸ್ಥಿತಿಯ ಬಗ್ಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಲಾಗುತ್ತದೆ ಎಂದು ಸಂಘಟನಾ ಅಧ್ಯಕ್ಷ ಡಾ. ಡೆನ್ಝಿಲ್ ಪಿಂಟೋ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕ ಫಾ. ಪ್ಯಾಟ್ರಿಕ್ ರೊಡ್ರಿಗಸ್ ಕಾರ್ಯಾಗಾರದ ಅಧ್ಯಕ್ಷತೆ ವಹಿಸುವರು. ಮನೋರೋಗಿಗಳ ವೈದ್ಯಕೀಯ ಆರೈಕೆ, ಅರಿವು ಮೂಡಿಸುವ ಸಲುವಾಗಿ ವಿವಿಧ ತಜ್ಞರೊಂದಿಗೆ ಸಂವಾದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮತ್ತು ವಿವಿಧ ರಾಜ್ಯದ ಪ್ರತಿನಿಧಿಗಳು ಪಾಲ್ಗೊಳ್ಳುವರು ಎಂದು ಹೇಳಿದರು.
ನಗರ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ
ಉಡುಪಿ: ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸಭೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಜಿಲ್ಲಾ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಶೀಲಾ ಕೆ. ಶೆಟ್ಟಿ ಮಾತನಾಡಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಧ್ಯಾ ರಮೇಶ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವೀಣಾ ಕೆ. ಶೆಟ್ಟಿ, ರಾಜ್ಯ ಪರಿಷತ್ ಸದಸ್ಯೆ ಗೀತಾ ರವಿ ಶೇಟ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಮಿತ್ರಾ ಆರ್. ನಾಯಕ್ ಇದ್ದರು.