ನಕ್ಸಲ್ ಪೀಡಿತ ಪ್ರದೇಶ ಅಭಿವೃದ್ಧಿಗೆ ರು. 9.37 ಕೋಟಿ ಬಿಡುಗಡೆ
ಮಣಿಪಾಲ: ಜಿಲ್ಲೆಯ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ 118 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸರ್ಕಾರ 9.37 ಕೋಟಿ ಬಿಡುಗಡೆ ಮಾಡಿದೆ. ಅದರಲ್ಲಿ ಈಗಾಗಲೇ ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು, ಉಳಿದ ಕ್ಚಾಮಗಾರಿಗಳನ್ನು ಅಕ್ಟೋಬರ್ ತಿಂಗಳೊಳಗೆ ಮುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ನಕ್ಸ್ಲ್ ಪೀಡಿತ ಪ್ರದೇಶದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷ್ಯತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.