'ಅತಿಸಾರ ಭೇದಿ ತೀವ್ರತರ ನಿಯಂತ್ರಣ' ಪಾಕ್ಷಿಕ ಆಚರಣೆ
ಉಡುಪಿ: ಮಕ್ಕಳನ್ನು ಆರೋಗ್ಯವಂತರನ್ನಾಗಿ ಬೆಳೆಸುವುದು ಪೋಷಕರ ಹಾಗೂ ಸಮಾಜದ ಜವಾಬ್ದಾರಿ ಎಂದು ಜಿಲ್ಲಾ ಪಂಚಾಯಿತಿ ಪ್ರಬಾರ ಅಧ್ಯಕ್ಷ ಉದಯ ಕೋಟ್ಯಾನ್ ಹೇಳಿದ್ದಾರೆ.
ಅವರು ಸೋಮವಾರ ನಗರದ ತಾಯಿ- ಮಕ್ಕಳ ಆಸ್ಪತ್ರೆಯಲ್ಲಿ ಜಿ.ಪಂ. ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಹಯೋಗದಲ್ಲಿ 'ಅತಿಸಾರ ಭೇದಿ ತೀವ್ರತರ ನಿಯಂತ್ರಣ' ಪಾಕ್ಷಿಕ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅತಿಥಿಗಳಾಗಿ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ. ಕನಗವಲ್ಲಿ, ತಾ.ಪಂ. ಅಧ್ಯಕ್ಷೆ ಸುನಿತಾ ನಾಯಕ್, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿ ಶ್ರೀಯಾನ್, ಜಿಲ್ಲಾ ಸರ್ಜನ್ ಆನಂದ ನಾಯಕ್ ಇದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಚಂದ್ರ ಬಾಯರಿ ಸ್ವಾಗತಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಿ. ಸತ್ಯನಾರಾಯಣ ವಂದಿಸಿದರು.