ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಉಡುಪಿ: ವೃತ್ತಿ ತರಬೇತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Vishwanath S
Updated On : 11 Jun 2014, 11:22 am

ಉಡುಪಿ: ವೃತ್ತಿ ಶಿಕ್ಷಣದಲ್ಲಿ ಪಡೆದ ತರಬೇತಿಯನ್ನು ಸ್ವಂತಿಕೆಯೊಂದಿಗೆ ಬಳಸಿದಾಗ ವೃತ್ತಿ ಜೀವನದಲ್ಲಿ ಉನ್ನತಿ ಸಾಧ್ಯ ಎಂದು ಶಿರ್ವ ಕೆನರಾ ಬ್ಯಾಂಕ್ ಹಿರಿಯ ಶಾಖಾಧಿಕಾರಿ ಅನಂತಕೃಷ್ಣ ವಿ.ಕೆ. ಹೇಳಿದರು.
ಅವರು ಇತ್ತೀಚೆಗೆ ಇಲ್ಲಿನ ಐಐಟಿ ಕಾಲೇಜಿನ ವೃತ್ತಿ ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅತಿಥಿಯಾಗಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಹಿರಿಯ ಶಿಕ್ಷಕ ಬಿ. ಪುಂಡಲೀಕ ಮರಾಠೆ ಆಗಮಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕ, ಪ್ರಾಂಶುಪಾಲ ಉದಯ ಆಚಾರ್ಯ ವಹಿಸಿದ್ದರು. ಸಂಸ್ಥೆಯ ಪ್ರಬಂಧಕಿ ಪವಿತ್ರಾ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement