ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಬೆಳಪು ಗ್ರಾಮದಲ್ಲಿ ವಿಜ್ಞಾನ ಕೇಂದ್ರ ನಿರ್ಮಾಣ: ಸೊರಕೆ

Vishwanath S
Updated On : 12 Jun 2014, 11:27 am

ಉಡುಪಿ: ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಉದ್ಯಮಗಳು ಕಾಲಿಟ್ಟಿರುವುದರಿಂದ, ಮುಂದೆ ಕಾಪು ಕ್ಷೇತ್ರದಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ ಎಂದು ಕಾಪು ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಹೇಳಿದ್ದಾರೆ.
ಅವರು ಬುಧವಾರ ಫಲಿಮಾರು ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ, ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 2 ವಿಜ್ಞಾನ ಕೇಂದ್ರಗಳು ಮಂಜೂರಾಗಿದ್ದು, ಒಂದು ಬೆಂಗಳೂರುನಲ್ಲಿ ಸ್ಥಾಪನೆಯಾಗಲಿದೆ. ಇನ್ನೊಂದು ಕೇಂದ್ರ ಉಡುಪಿ ಜಿಲ್ಲೆಗೆ ಮಂಜೂರಾಗಿದ್ದು, ಅದಕ್ಕೆ 30 ಎಕರೆ ಭೂಮಿ ಬೇಕಾಗಿದ್ದು, ಕಾಪು ಕ್ಷೇತ್ರದ ಬೆಳಪು ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಿಸಲು ಯೋಜಿಸಲಾಗಿದೆ ಎಂದು ಸಚಿವರು ಹೇಳಿದರು.
ಅಲ್ಲದೆ ಕಾಪು ಕ್ಷೇತ್ರದಲ್ಲಿ ಕೆ.ಜಿ. ತರಗತಿಯಿಂದ ಸ್ನಾತಕೋತ್ತರ ಪದವಿವರೆಗೆ ಶಿಕ್ಷಣ ದೊರೆಯುವಂತಹ ವ್ಯವಸ್ಥೆಗಳನ್ನು ಮಾಡಲಾಗುವುದು. ಈಗಾಗಲೇ ಇಲ್ಲಿನ ಎಲ್ಲೂರು ಗ್ರಾಮಕ್ಕೆ ಐ.ಟಿ.ಐ. ಮಂಜೂರಾಗಿದ್ದು, ಈ ಶೈಕ್ಷಣಿಕ ವರ್ಷದಿಂದಲೇ ಅದು ಕಾರ್ಯಾರಂಭಿಸಲಿದೆ ಎಂದರು.  ಅಧ್ಯಕ್ಷತೆಯನ್ನು ಫಲಿಮಾರು ಗ್ರಾಪಂ ಅಧ್ಯಕ್ಷೆ ಮಾಲತಿ ದಿವಾಕರ ವಹಿಸಿದ್ದರು. ಸ್ಥಳೀಯ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ, ತಾಪಂ ಸದಸ್ಯೆ ಅಮಿತಾ ಪೂಜಾರಿ, ಗ್ರಾಪಂ ಉಪಾಧ್ಯಕ್ಷ ಗಿರಿಯಪ್ಪ ಪೂಜಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement