ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಮೋದ್ ಮಧ್ವರಾಜ್ ಭೇಟಿ

Rashmi Kasaragodu
Updated On : 27 Jun 2014, 12:58 pm

ಉಡುಪಿ: ಉಡುಪಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಇತ್ತೀಚೆಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡಿ ಅಲ್ಲಿನ ಕುಂದುಕೊರತೆಗಳನ್ನು ಹಾಗೂ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳ ವಿಲೇವಾರಿಯ ಬಗ್ಗೆ ಪರಿಶೀಲಿಸಿದರು. ಕಚೇರಿಯಲ್ಲಿ ಚಾಲನಾ ಅನುಜ್ಞಾ ಪತ್ರ ಮತ್ತು ನೋಂದಣಿಯ ವಿವರಗಳನ್ನು ಗಣಕಯಂತ್ರದಲ್ಲಿ ಡಾಟಾ ಎಂಟ್ರಿ ಮಾಡುವಾಗ ತಪ್ಪಾಗದಂತೆ ಎಚ್ಚರಿಕೆ ವಹಿಸಲು ಈ ವಿವರಗಳು ಸಾರ್ವಜನಿಕರಿಗೆ ಕಾಣುವಂತೆ ಡಾಟಾ ಎಂಟ್ರಿ ಮಾಡಲು ಒಂದು ಹೆಚ್ಚುವರಿ ಮಾನಿಟರ್ ಅನ್ನು ಶಾಸಕರು ಅಳವಡಿಸಲು ಸೂಚಿಸಿದರು.


ರಸ್ತೆ, ಚರಂಡಿ ಕಾಮಗಾರಿ: ಜಿಲ್ಲಾಧಿಕಾರಿ ಪರಿಶೀಲನೆ
ಉಡುಪಿ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಹಾಗೂ ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ 2ನೇ ಹಂತದ ಕಾಮಗಾರಿಗಳಡಿ ರು. 5 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಉಡುಪಿ ಜಿಲ್ಲಾಧಿಕಾರಿ ಡಾ. ಮುದ್ದುಮೋಹನ್ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಅವರ ಜೊತೆ ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸಾಧು, ಮುಖ್ಯಾಧಿಕಾರಿ ಗೋಪಾಲಕೃಷ್ಣ ಜೊತೆಗಿದ್ದರು. ಕುಂದಾಪುರ ಸಹಾಯಕ ಆಯುಕ್ತರಾದ ಯೋಗೇಶ್ವರ್, ಕುಂದಾಪುರ ಪುರಸಭೆಯ ಅಧ್ಯಕ್ಷರಾದ ಕಲಾವತಿ ಯು.ಎಸ್. ಮುಖ್ಯಾಧಿಕಾರಿ ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement