ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ನಾಡಗೀತೆ ಅಭಿಯಾನ ಕಾರ್ಯಕ್ರಮ

Rashmi Kasaragodu
Updated On : 13 Mar 2014, 12:18 pm

ಉಡುಪಿ: ಸಾರ್ವಜನಿತ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ನಗರದ ವಳಕಾಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಮಟ್ಟದ ನಾಡಗೀತೆ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಜಿಲ್ಲಾ ಸರ್ವ ಶಿಕ್ಷಣ ಅಭಿಯಾನದ ಉಪಯೋಜನಾ ಸಮನ್ವಯಾಧಿಕಾರಿ ಪಿ. ನಾಗರಾಜು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯ 550ಕ್ಕೂ ಹೆಚ್ಚು ಮಕ್ಕಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ್ ದೇವಾಡಿಗ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಸ್ಥಳೀಯ ನಗರಸಭಾ ಸದಸ್ಯೆ ಗೀತಾ ರವಿ ಶೇಟ್, ಜಿಲ್ಲಾ ಶಿಕ್ಷಣಾಧಿಕಾರಿ ಅಶೋಕ್ ್ಕಾಮತ್, ಪ್ರೌಢಶಾಲಾ ಮುಖ್ಯಸ್ಥೆ ನಿರ್ಮಲ, ಶಿಕ್ಷಣ ಸಂಪನ್ಮೂಲ ವ್ಯಕ್ತಿಗಳಾದ ಪುಷ್ಪಾವತಿ, ವಾಣಿಶ್ರೀ, ಪ್ರಮೋದ್ ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ಮುಖ್ಯಸ್ಥೆ ಎಂ. ಪದ್ಮಾವತಿ ಸ್ವಾಗತಿಸಿದರು. ಶಿಕ್ಷಣ ಸಮನ್ವಯಾಧಿಕಾರಿ ಮಾಯಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿಯರಾದ ಲಲಿತ, ಹರಿಣ ಕಾರ್ಯಕ್ರಮ ನಿರೂಪಿಸಿದರು. ಕಾತ್ಯಾಯಿನಿ ವಂದಿಸಿದರು.
ರಸ್ತೆ ಡಾಂಬರೀಕರಣಕ್ಕೆ ಗುದ್ದಲಿಪೂಜೆ
ಉಡುಪಿ: ಬಂಟಕಲ್ ಸಮೀಪದ ಬಿ.ಸಿ. ರೋಡ್ ಗುಂಡುಕಲ್ಲು ರಸ್ತೆ ಡಾಂಬರೀಕರಣಕ್ಕೆ ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್ ಗುರುವಾರ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಜಿ.ಪಂ. ನಿಕಟಪೂರ್ವಾಧ್ಯಕ್ಷ ಕಟಪಾಡಿ ಶಂಕರ ಪೂಜಾರಿ, ಜಿ.ಪಂ. ಸದಸ್ಯೆ ಐಡಾಗಿಬ್ಬ ಡಿ'ಸೋಜ,  ಉಡುಪಿ ತಾ.ಪಂ. ನಿಕಟಪೂರ್ವಾಧ್ಯಕ್ಷ ಕೆ. ದೇವದಾಸ ಹೆಬ್ಬಾರ್, ಶಿರ್ವ ಗ್ರಾ.ಪಂ. ಅಧ್ಯಕ್ಷ ಹಸನಬ್ಬ ಶೇಖ್, ತಾ.ಪಂ. ಸದಸ್ಯ ಕುಟ್ಟಿ ಪೂಜಾರಿ ಶಿರ್ವ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement