ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉಡುಪಿ

ಕಾರ್ಪ್ ಬ್ಯಾಂಕ್‌ನಿಂದ 'ಕಾರ್ಪ್ ಕಿರಣ್‌'

Srinivasa Murthy VN
Updated On : 15 Mar 2014, 12:20 pm

ಉಡುಪಿ: ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ ಅಡಿಯಲ್ಲಿ ಕಾರ್ಪೊರೇಷನ್ ಬ್ಯಾಂಕ್ 'ಕಾರ್ಪ್ ಕಿರಣ್‌' ಎಂಬ ಮಹಿಳಾ ಕಲ್ಯಾಣ ಸಂಘ ಸ್ಥಾಪಿಸಿ ಅದರ ಮೂಲಕ ಅವಕಾಶ ವಂಚಿತ ವರ್ಗದವರಿಗೆ ಸಹಾಯ ಮಾಡಲು ಕ್ರಮ ಕೈಗೊಂಡಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಎಸ್.ಆರ್. ಬನ್ಸಾಲ್ ತಿಳಿಸಿದ್ದಾರೆ. ಕಾರ್ಪೊರೇಷನ್ ಬ್ಯಾಂಕ್‌ನ ಉಡುಪಿ ವಲಯ ಕಚೇರಿಯಲ್ಲಿ ಇತ್ತೀಚೆಗೆ ನಡೆದ 109ನೇ ಸ್ಥಾಪನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಬ್ಯಾಂಕ್ ತನ್ನ ಅಮೂಲ್ಯ ಗ್ರಾಹಕರ ಸೇವೆಯಲ್ಲಿ ಫಲಪ್ರದ 109 ವರ್ಷಗಳನ್ನು ಪೂರ್ಣಗೊಳಿಸಿದ್ದು, ಈ ಶುಭ ದಿನವನ್ನು ಸ್ಮರಣೀಯವಾಗಿಸಲು ಬ್ಯಾಂಕ್ ಈ ದಿನ 109 ಶಾಖೆ ಹಾಗೂ 109 ಎಟಿಎಂಗಳನ್ನು ತೆರೆಯಲಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ 302 ಶಾಖೆಗಳನ್ನು ತೆರೆಯುವುದರೊಂದಿಗೆ ಒಟ್ಟು 2009 ಶಾಖೆಗಳನ್ನು ಹೊಂದಿದಂತಾಗುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement