ಹೆಬ್ರಿ: ಇಂದು ಕಾಂಗ್ರೆಸ್ ಬೃಹತ್ ಸಮಾವೇಶ
ಹೆಬ್ರಿ: ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಸಹಕಾರದಲ್ಲಿ ಹೆಬ್ರಿ ಬಸ್ ನಿಲ್ದಾಣದಲ್ಲಿ ಮಾ.18ರಂದು ಸಂಜೆ 3.30ಕ್ಕೆ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಯಲಿದೆ ಎಂದು ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ತಿಳಿಸಿದ್ದಾರೆ. ಚಿಕ್ಕಮಗಳೂರು- ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ನಗರಾಭಿವೃದ್ಧಿಸಚಿವ ವಿನಯ ಕುಮಾರ್ ಸೊರಕೆ, ಕಾಂಗ್ರೆಸ್ ಹಿರಿಯ ಮುಖಂಡ, ಕೆಪಿಸಿಸಿ ಸದಸ್ಯ ಹೆಬ್ರಿ ಗೋಪಾಲ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಶಾಸಕ ಗೋಪಾಲ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವೆರೋನಿಕಾ ಕರ್ನೇಲಿಯೋ ಭಾಗವಹಿಸುವರು.