ಅಮೃತ ಸೋಮೇಶ್ವರಗೆ ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ
ಉಡುಪಿ: ಇಲ್ಲಿನ ಯಕ್ಷಗಾನ ಕಲಾರಂಗದ ವತಿಯಿಂದ ಯಕ್ಷಗಾನ ವಿದ್ವಾಂಸರಿಗೆ ನೀಡುವ 'ತಲ್ಲೂರು ಕನಕಾ - ಅಣ್ಣಯ್ಯ ಶೆಟ್ಟಿ ಪ್ರಶಸ್ತಿ'ಗೆ ಈ ಬಾರಿ ಬಹುಮುಖ ಪ್ರತಿಭೆಯ ವಿದ್ವಾಂಸ, ಲೇಖಕ, ಸಂಶೋಧಕ, ಯಕ್ಷಗಾನ ಪ್ರಸಂಗಕರ್ತ ಪ್ರೊ. ಅಮೃತ ಸೋಮೆಶ್ವರ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ 17ರಂದು ಸಂಜೆ 4.30ಕ್ಕೆ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜರಗಲಿದೆ. ವಿಶ್ರಾಂತ ಕುಲಪತಿ ಡಾ. ಬಿ. ಎ. ವಿವೇಕ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್ ಅಭಿನಂದನ ಭಾಷಣ ಮಾಡಲಿದ್ದಾರೆ. ಯಕ್ಷಗಾನ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿ ಶುಭಾಶಂಸನೆಗೈಯ್ಯಲಿದ್ದಾರೆ.