ಉತ್ತರ ಕನ್ನಡ

ಬಿಜೆಪಿ ಮತ್ತೆ ಅಧಿಕಾರಕ್ಕೆ

ಮುಂಡಗೋಡ: ರಾಜ್ಯದಲ್ಲಿ ಕೃಷಿ ಬಜೆಟ್ ಮಂಡಿಸಿ ದೇಶದಲ್ಲಿಯೇ ಇತಿಹಾಸ ನಿರ್ಮಿಸಿರುವ ಬಿಜೆಪಿ ಸರ್ಕಾರ ಚುನಾವಣೆ ನಂತರ ಮತ್ತೆ ಆಡಳಿತಕ್ಕೆ ಬರಲಿದೆ ಎಂದು ಗೇರು ಅಭಿವೃದ್ಧಿ ಮಂಡಳಿ ಅಧ್ಯಕ್ಷ ವಿನೋದ ಪ್ರಭು ಹೇಳಿದರು.
ಬುಧವಾರ ಇಲ್ಲಿಯ ಸಾಯಿ ಮಂದಿರದಲ್ಲಿ ಮನೆ ಮನೆಗೆ ಬಿಜೆಪಿ ಜನಜಾಗರಣ ಅಭಿಯಾನವನ್ನುದ್ದೇಶಿಸಿ ಮಾತನಾಡುತ್ತಿದ್ದರು. 60 ವರ್ಷಗಳಲ್ಲಿ ಯಾವುದೇ ಸರ್ಕಾರಗಳು ಮಾಡದಷ್ಟು ಅಭಿವೃದ್ಧಿಯನ್ನು 5 ವರ್ಷದಲ್ಲಿ ಬಿಜೆಪಿ ಸರ್ಕಾರ ಮಾಡಿ ತೋರಿಸಿದೆ.
ನಗರಾಭಿವೃದ್ಧಿ ಸುವರ್ಣ ಗ್ರಾಮೋದಯ ಹಾಗೂ ವಿವಿಧ ಯೋಜನೆಯಡಿಯಲ್ಲಿ ಗ್ರಾಮೀಣ ಅಭಿವೃದ್ಧಿ ಕೂಡ ಮಾಡಿದೆ. ನೀರಾವರಿ ಸೇರಿದಂತೆ ಯಾವುದೇ ಕ್ಷೇತ್ರಕ್ಕೂ ಕೊರತೆಯಾಗದಂತೆ ಕೆಲಸ ಮಾಡಿದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬಿಜೆಪಿಯ ಅಭಿವೃದ್ಧಿ ದೃಷ್ಟಿಕೋನವನ್ನು ಜನತೆ ಅರಿತಿದ್ದಾರೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಕೆ. ಹೆಗಡೆ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಂ.ಜಿ. ಭಟ್, ಜಿಲ್ಲಾ ಪ್ರಮುಖ ಕೇಶವ ನಾಯ್ಕ, ಜಿಲ್ಲಾ ಮಹಿಳಾ ಮೋರ್ಚಾಧ್ಯಕ್ಷೆ ಸುಮನ ಕುಲಕರ್ಣಿ, ಪಪಂ ಉಪಾಧ್ಯಕ್ಷ ನಾಗಭೂಷಣ ಹಾವಣಗಿ, ಡಿ.ಜೆ. ಕುಲಕರ್ಣಿ, ಪುಟ್ಟಣ್ಣ ಅಂಗಡಿ, ಉಮೇಶ ಬಿಜಾಪುರ, ತುಕಾರಾಮ ಇಂಗಳೆ, ಎಂ.ಪಿ. ಕುಸೂರ, ತಿಪ್ಪೆಸ್ವಾಮಿ ಚಿಕ್ಕಮಠ, ಬಾಬು ಮಿರಜಕರ, ಹಾಲಪ್ಪ ಕೋಡಂಬಿ, ನಾಗೇಂದ್ರ ವರ್ದಿ, ನಿಂಬಾಯಿ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ