ಗಿಬ್ ಶಾಲೆಯಲ್ಲಿ ಬಹುಮಾನ ವಿತರಣೆ
ಕುಮಟಾ: ಇಲ್ಲಿಯ ಕೆನರಾ ಎಜ್ಯುಕೇಶನ್ ಸೊಸೈಟಿಯ ಗಿಬ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವನ್ನು ಮೋಹನ ಕೆ. ಶೆಟ್ಟಿ ಮೆಮೋರಿಯಲ್ ಟ್ರಸ್ಟ್ನ ಉಪಾಧ್ಯಕ್ಷ ರವಿಕುಮಾರ ಮೋಹನ ಶೆಟ್ಟಿ ಉದ್ಘಾಟಿಸಿದರು. ಅತಿಥಿಗಳಾಗಿದ್ದ ಡಾ ಎ.ವಿ. ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ ಎಸ್.ವಿ. ಕಾಮತ್, ಶಿಕ್ಷಕ-ಪಾಲಕ-ಬಾಲಕರ ಅವಿಚ್ಛಿನ್ನ ಸಂಬಂಧ ಅಜರಾಮರವಾಗಿ ಉಳಿಯುವಂತೆ ಸಂಸ್ಥೆ ಮಾಡಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಎನ್.ಆರ್. ಗಜು ಮಾತನಾಡಿ, ಅಧಿಕ ಅಂಕ ಗಳಿಕೆ ಒಂದರಿಂದಲೇ ಬದುಕು ನಿರ್ಧರಿತವಾಗುವುದಿಲ್ಲ. ಬದುಕು ರೂಪಿಸಲು ಮಗುವಿಗೆ ಮನೆ-ಶಾಲೆ-ಪರಿಸರಗಳಲ್ಲಿ ಪ್ರೀತಿ-ಸ್ನೇಹ-ವಾತ್ಸಲ್ಯ ಸಮೃದ್ಧವಾಗಿ ದೊರಕಬೇಕು ಎಂದರು. ಸಂಸ್ಥೆಯ ಉಪಕಾರ್ಯಾಧ್ಯಕ್ಷ ಶಿರೀಶ್ ಪಿ. ನಾಯಕ, ಕಾರ್ಯದರ್ಶಿ ಕಮಲಾ ರಾವ್, ಉದ್ಯಮಿ ಎಂ.ಬಿ. ಪೈ, ಗಿಬ್ ಪ್ರಾಥಮಿಕ ಶಾಲಾ ಮುಖ್ಯಾಧ್ಯಾಪಕ ಎಸ್.ಬಿ. ನಾಯಕ ಶುಭಕೋರಿದರು. ಸಂಸ್ಥೆಯ ಕಾರ್ಯಾಧ್ಯಕ್ಷ ವಸುದೇವ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧ್ಯಾಪಕ ವಿನಾಯಕ ಶಾನಭಾಗ ಸ್ವಾಗತಿಸಿದರು. ಹಿರಿಯ ಶಿಕ್ಷಕಿ ಇಂದಿರಾ ನಾಯ್ಕ ವರದಿ ವಾಚಿಸಿದರು. ಶಿಕ್ಷಕಿ ಅಕ್ಷತಾ ಶೇಟ್ ನಿರೂಪಿಸಿದರು. ಶಿಕ್ಷಕ ಲಕ್ಷ್ಮೀಶ್ ಭಟ್ಟ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.