ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉತ್ತರ ಕನ್ನಡ

ದಲಿತ ದೌರ್ಜನ್ಯ ಪೀಡಿತ ಜಿಲ್ಲೆ ಘೋಷಣೆಗೆ ಆಗ್ರಹ

Parashurama
Updated On : 8 Feb 2013, 11:03 am

ಯಲ್ಲಾಪುರ:  ಜಿಲ್ಲೆಯನ್ನು ದಲಿತ ದೌರ್ಜನ್ಯ ಪೀಡಿತ ಎಂದು ಘೋಷಿಸುವಂತೆ ಆಗ್ರಹಿಸಿ, ರಾಜ್ಯ ದಲಿತಪರ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ದಲಿತರ ಸ್ವಾಭಿಮಾನ ನಡಿಗೆ ಕಾರ್ಯಕ್ರಮ ಗುರುವಾರ ನಡೆಯಿತು.  ನೂರಾರು ದಲಿತರು ದೇವಿ ಮೈದಾನದಿಂದ ಅಂಬೇಡ್ಕರ್ ವೃತ್ತದ ಮೂಲಕ ತಹಸೀಲ್ದಾರ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.  ಮೆರವಣಿಗೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಎರಡು ತಿಂಗಳ ಹಿಂದೆ ಗುಂಡೇಟಿಗೆ ಬಲಿಯಾದ ಅರಣ್ಯ ಕಾವಲುಗಾರ ಮಹಾದೇವ ಸಿದ್ದಿ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಲಾಯಿತು. ಮೆರವಣಿಗೆಯಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ರಾಜೇಶ ದೇಶಭಾಗ, ಪ್ರಧಾನ ಸಂಚಾಲಕ ಚಂದ್ರಕಾಂತ ಕಾದ್ರೊಳ್ಳಿ, ದಲಿತ ಮುಖಂಡರಾದ ಪಿ.ಟಿ. ಮರಾಠೆ, ದ್ಯಾಮಣ್ಣ ಬೋವಿವಡ್ಡರ್, ಘನಶ್ಯಾಮ ರೇವಣಕರ್, ಉಮೇಶ ಶಿರಾಲಿ, ಮಾರುತಿ ಬೋವಿವಡ್ಡರ್, ಯಲ್ಲಪ್ಪ ಬೋವಿವಡ್ಡರ್, ಗಣೇಶ ಪಾಟಣಕರ್, ತಾಮೀರ್ ಬ್ಯಾಂಕ್ ಅಧ್ಯಕ್ಷ ಮಹಮ್ಮದ್ ಗೌಸ್, ಶಫಿ ಶೇಖ್, ಶಕೀಲ್ ಅಹ್ಮದ್ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments