ಇಂದು ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರವಾಸ
ಶಿರಸಿ: ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಫೆ. 9ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 9.30ಕ್ಕೆ ನಗರದ ಹಳೆ ಬಿಇಓ ಆಫೀಸ್ನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜ್ ಮಾರಿಗುಡಿಯ ವಾರ್ಷಿಕ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. 11 ಗಂಟೆಗೆ ಕೊಳಗಿಬೀಸ್ ಪಿಯು ಕಾಲೇಜ್ನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3.30ಕ್ಕೆ ನಗರದ ರಾಯಪ್ಪ ಶಾಲೆ ಆವರಣದಲ್ಲಿ ಸರ್ಕಾರಿ ಪದವಿ ಕಾಲೇಜ್ನಲ್ಲಿ ಶ್ರೀ ವಿವೇಕಾನಂದರ ಜನ್ಮ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವರು 4.15ಕ್ಕೆ ನಗರದ ಯಲ್ಲಾಪುರ ನಾಕಾ ಹತ್ತಿರ ಬಸ್ ತಂಗುದಾಣ ಉದ್ಘಾಟನೆ ನೆರವೇರಿಸಲಿದ್ದಾರೆ. 4.30ಕ್ಕೆ ನಗರದ ನಂ. 3 ಶಾಲೆ ಕಟ್ಟಡದ ಭೂಮಿಪೂಜೆ ಮಾಡಲಿರುವ ಕಾಗೇರಿ 5.15ಕ್ಕೆ ನಗರಸಭೆ ಹತ್ತಿರ ಬಸ್ನಿಲ್ದಾಣ ಉದ್ಘಾಟಿಸುವರು. ಸಂಜೆ 6ಕ್ಕೆ ತೋಟಗಾರಿಕಾ ಇಲಾಖೆ ಆವರಣದಲ್ಲಿ ನಡೆಯಲಿರುವ ಫಲಪುಷ್ಪ ಪ್ರದರ್ಶನ ಉದ್ಘಾಟಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.