ಬಜೆಟ್ ನಿರಾಶಾದಾಯಕ: ಪ್ರಮೋದ ಹೆಗಡೆ
ಕಾರವಾರ: ರಾಮರಾಜ್ಯದ ಭ್ರಮಾಲೋಕವನ್ನು ಸೃಷ್ಟಿಸಿದ್ದ ಬಿಜೆಪಿಯ ಬಜೆಟ್ ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಪ್ರಮೋದ ಹೆಗಡೆ ಟೀಕಿಸಿದ್ದಾರೆ.
ಪ್ರಸ್ತುತ ಬಜೆಟ್ ಸೇರಿದಂತೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಮಂಡಿಸಿದ ಎಲ್ಲ ಬಜೆಟ್‌ಗಳೂ ಜನತೆಯ ಆಶೋತ್ತರ ಈಡೇರಿಸುವಲ್ಲಿ ವಿಫಲವಾಗಿವೆ. ಬಿಜೆಪಿಯಲ್ಲಿ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಜಿಲ್ಲೆಗೆ ರು. 100 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿದ್ದರು. ಅದರಲ್ಲಿ ಚಿಕ್ಕಾಸೂ ಬರಲಿಲ್ಲ. ಸಾಲಮನ್ನಾದ ಬಗ್ಗೆ ಬಜೆಟ್‌ನಲ್ಲಿ ಏನನ್ನೂ ಹೇಳಿಲ್ಲ ಎಂದು ತಿಳಿಸಿದ್ದಾರೆ. ನಾಡಿಗೆ ವಿದ್ಯುತ್ ಕೊಟ್ಟ ಜಿಲ್ಲೆಯ ಶೇ. 50ರಷ್ಟು ಪ್ರದೇಶ ಕತ್ತಲೆಯಲ್ಲಿದೆ. ಕರಾವಳಿ ಉತ್ಸವ ಹಾಗೂ ಕದಂಬೋತ್ಸವದ ಬಗ್ಗೆ ಉತ್ಸಾಹ ತೋರಿಸುತ್ತಿಲ್ಲ. ಜಿಲ್ಲೆಗೆ ಬಜೆಟ್‌ನಲ್ಲಿ ಹೊಸ ಯೋಜನೆ ಇಲ್ಲ. ಈ ಹಿಂದೆ ಮಂಜೂರಾದ ಕಾಮಗಾರಿಗಳಿಗೇ ಹಣ ಬಿಡುಗಡೆಯಾಗುತ್ತಿಲ್ಲ. ಉತ್ತರ ಕನ್ನಡದಲ್ಲಿ ಪ್ರವಾಸಿ ತಾಣಗಳು ಸಾಕಷ್ಟಿವೆ. ಇಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಿದರೆ ಜಿಲ್ಲೆಗೆ ಅನುಕೂಲವಾಗುತ್ತಿತ್ತು. ಆದರೆ ಬಜೆಟ್‌ನಲ್ಲಿ ಪ್ರವಾಸೋದ್ಯಮದ ಬಗ್ಗೆ ಪ್ರಸ್ತಾಪವಿಲ್ಲ. ಇಬ್ಬರು ಸಚಿವರಿದ್ದರೂ ಜಿಲ್ಲೆಗೆ ನ್ಯಾಯ ದೊರಕಿಸಿಕೊಡುವಲ್ಲಿ ಸಫಲರಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಹಣ ತರುವಲ್ಲಿ ಸೋತಿದ್ದಾರೆ ಎಂದು ಪ್ರಮೋದ ಹೆಗಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.