ಉತ್ತರ ಕನ್ನಡ

ಇಂದಿನಿಂದ ಸುವರ್ಣ ಮಹೋತ್ಸವ

ಭಟ್ಕಳ:  ನಗರದ ಚೌಥನಿಯಲ್ಲಿರುವ ಕಾಳಿಕಾಂಬಾ ದೇವಸ್ಥಾನದ ಸುವರ್ಣ ಮಹೋತ್ಸವ ಸಂಭ್ರಮ, ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಫೆ. 11ರಿಂದ ಫೆ. 14ರ ತನಕ ನಡೆಯಲಿದೆ. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗಜಾನನ ಆಚಾರ್ಯ ವಿವರ ನೀಡಿ, ವಿಶ್ವಕರ್ಮ ಜಗದ್ಗುರು ಸುಜ್ಞಾನ ಪ್ರಭು ಪೀಠಾಧ್ಯಕ್ಷ, ಶ್ರೀ ಗುರು ಶಿವ ಸುಜ್ಞಾನ ತೀರ್ಥ ಮಹಾಸ್ವಾಮೀಜಿ, ಶ್ರೀ ಕಾಳ ಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಶ್ರೀ ಶಿವಾತ್ಮಾನಂದ ಸರಸ್ವತಿ ಸ್ವಾಮೀಜಿ ಇವರ ಉಪಸ್ಥಿತಿಯಲ್ಲಿ ಕಾಳಿಕಾಂಬಾ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಗರ್ಭಗುಡಿಯಲ್ಲಿ ಶ್ರೀ ಕಾಳಿಕಾಂಬ ಅಮ್ಮನವರ ವಿಗ್ರಹ ಅಷ್ಟಬಂಧ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವು ನಡೆಯಲಿದೆ ಎಂದರು.
ಸಭಾ ಕಾರ್ಯಕ್ರಮ: ಫೆ. 11ರ ಸಂಜೆ 4ಕ್ಕೆ  ಶ್ರೀ ಗುರು ಶಿವ ಸುಜ್ಞಾನತೀರ್ಥ ಮಹಾಸ್ವಾಮೀಜಿ, ಶ್ರೀ ಕಾಳ ಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಶ್ರೀ ಶಿವಾತ್ಮಾನಂದ ಸರಸ್ವತಿ ಸ್ವಾಮೀಜಿ  ಉಪಸ್ಥಿತಿಯಲ್ಲಿ ಶ್ರೀ ಗುರು ಸುದೀಂದ್ರ ಕಾಲೇಜು ಮೈದಾನದಿಂದ ಚೌಥನಿಯ ಶ್ರೀ ಕಾಳಿಕಾಂಬ ದೇವಸ್ಥಾನಕ್ಕೆ ಹೊರಕಾಣಿಕೆಯ ಭವ್ಯ ಮೆರವಣಿಗೆ ಹೊರಡುವುದು, ರಾತ್ರಿ 8 ಗಂಟೆಗೆ ಸಭಾಕಾರ್ಯಕ್ರಮ ಅಧ್ಯಕ್ಷತೆಯನ್ನು ಆಡಳಿತ ಮೊಕ್ತೇಸರ ಮೃತ್ಯುಂಜಯ ಆಚಾರ್ಯ ವಹಿಸುವರು. ಮಾಜಿ ಜಿಪಂ ಅಧ್ಯಕ್ಷ ದಾಮೋದರ ಗರ್ಡಿಕರ, ಅಣ್ಣಪ್ಪ ಅಬ್ಬಿಹಿತ್ಲು, ವಸಂತ ಆಚಾರ್ಯ, ಮಧುಕರ ಆಚಾರ್ಯ, ಗಜಾನನ ಶಂಕರ ಆಚಾರ್ಯ ಹಾಜರಿರುವರು. ಫೆ. 13ರ ಸಂಜೆ 4ಕ್ಕೆ ಸಭಾ ಕಾರ್ಯಕ್ರಮ ನಡೆಯುವುದು. ಶ್ರೀ ಸ್ವಾಮೀಜಿ ಯವರು ಉಪಸ್ಥಿತಿಯಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, ಮಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಶಿವಾನಂದ ನಾಯ್ಕ ಇರುವರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!