ಉಚಿತ ರಕ್ತ ಗುಂಪು ವರ್ಗೀಕರಣ ಶಿಬಿರ
ಅಂಕೋಲಾ: ತಾಲೂಕಿನ ಬೆಳಂಬಾರದ ಶ್ರೀ ಮಂಜುನಾಥ ಸ್ವಾಮಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಶಾಂತಿದಂತ ಚಿಕಿತ್ಸಾಲಯದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ರಕ್ತ ಗುಂಪು ವರ್ಗೀಕರಣ ಶಿಬಿರವನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷೆ ಮೀನಾಕ್ಷಿ ಆರ್. ನಾಯಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಡಾ. ಸಂಜು ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇವರ ಸೇವೆ ಎಲ್ಲರಿಗೂ ಲಭಿಸುವಂತಾಗಲಿ ಎಂದರು. ದಂತ ವೈದ್ಯ ಡಾ. ಸಂಜು ನಾಯಕ ಮಾತನಾಡಿ, ಪ್ರತಿಯೊಬ್ಬ ಮನುಷ್ಯನೂ ತನ್ನ ಹಾಗೂ ತನ್ನ ಕುಟುಂಬದವರ ರಕ್ತದ ಗುಂಪಿನ ಬಗ್ಗೆ ಮಾಹಿತಿ ಹೊಂದಿರಬೇಕು. ರಕ್ತದಾನಕ್ಕೆ ಜನರು ಸ್ವ ಇಚ್ಛೆಯಿಂದ ಮುಂದೆ ಬರಬೇಕು ಎಂದರು. ಶಾಲಾ ಶಿಕ್ಷಕರಾದ ಶಂಷಾದ ಎ. ಖಾನ್, ಮಂಗಲಾ ದೇವಳಿ, ಮೀರಾ ಆರ್. ನಾಯಕ ಅಂಕೋಲಾ ಸರ್ಕಾರಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ಮಂಜುನಾಥ ಪಟಗಾರ ಮತ್ತು ಸಾಜಿದ್ ಅಲಿ ಇದ್ದರು. ಮುಖ್ಯಾಧ್ಯಾಪಕ ಮೋಹನ ಎಸ್. ಶೆಟ್ಟಿ ಸ್ವಾಗತಿಸಿದರು. ಶಿಕ್ಷಕ ಎಸ್.ಎನ್. ಭಟ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ರಾಘವೇಂದ್ರ ಭಟ್ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.