ಶಿರಸಿ: ಸ್ವಾಮಿ ವಿವೇಕಾನಂದರ 150ನೇ ಜನ್ಮ ವರ್ಷಾಚರಣೆ ಅಭಿಯಾನ ನಿಮಿತ್ತ ಇಡೀ ದೇಶದಲ್ಲಿ ರಥಸಪ್ತಮಿ ದಿನ ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞ ನಡೆಯಲಿದೆ. ಶಿರಸಿಯ ರಾಘವೇಂದ್ರ ಕಲ್ಯಾಣ ಮಂಟಪದ ಆವಾರದಲ್ಲಿ ಫೆ. 17ರಂದು ಬೆಳಗ್ಗೆ 5.30ರಿಂದ 7.45ರ ವರೆಗೆ ಸಾಮೂಹಿಕ ಸೂರ್ಯ ನಮಸ್ಕಾರ ಯಜ್ಞ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 8762635123, 9448774780 ಸಂಪರ್ಕಿಸುವಂತೆ ವಿವೇಕಾನಂದರ 150ನೇ ವರ್ಷಾಚರಣೆ ಸಮಿತಿಯ ಜಿಲ್ಲಾ ಸಂಯೋಜಕ ಕೇಶವ ಮರಾಠೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.