ಉತ್ತರ ಕನ್ನಡ

ಕಾನೂನು ನಿಯಮ ವಿಚಾರ ಸಂಕಿರಣ

ಕಾರವಾರ:  ಅಪರಾಧ ನ್ಯಾಯ ವಿಚಾರಣೆಯಲ್ಲಿ ಭಾಗಿಯಾಗುವ ಎಲ್ಲರೂ ಕಾನೂನು ನಿಯಮಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರವೀಂದ್ರ ಎಂ. ವೈದ್ಯ ತಿಳಿಸಿದರು.
ಉತ್ತರ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಕಾರವಾರ ಅಭಿಯೋಜಕರ ಆಶ್ರಯದಲ್ಲಿ, ಕಾರವಾರ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಆಯೋಜಿಸಲಾಗಿದ್ದ ಅಪರಾಧ ಕಾನೂನು (ತಿದ್ದುಪಡಿ) ವಿಶೇಷ ಅಧಿನಿಯಮ- 2013 ವಿಚಾರ ಸಂಕಿರಣವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ಅಪರಾಧ ವಿಚಾರಣೆಯಲ್ಲಿ ಪಾಲ್ಗೊಳ್ಳುವ ನ್ಯಾಯಾಧೀಶರು, ವಕೀಲರು, ಅಭಿಯೋಜಕರು, ತನಿಖಾಧಿಕಾರಿಗಳು ಕಾನೂನು ನಿಯಮಗಳನ್ನು ಸಮರ್ಪಕವಾಗಿ ಬಳಸಬೇಕು. ಅಪರಾಧ ಪ್ರಕರಣಗಳ ವಿಚಾರಣೆ ಪ್ರಾರಂಭವಾದ ದಿನದಿಂದ ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ನ್ಯಾಯವಾದಿ ಡಿ.ಎಸ್. ನಾಯ್ಕ ಮಾತನಾಡಿ, ವಿಶೇಷ ಕಾಯ್ದೆಯ ಒಳಿತು-ಕೆಡಕುಗಳನ್ನು ಅಧ್ಯಯನ ಮಾಡಬೇಕು ಎಂದರು. ಯಾವ ರಾಷ್ಟ್ರದಲ್ಲಿ ಕಾನೂನು ಸಂಖ್ಯೆಗಳು ಮತ್ತು ಕಾರಾಗೃಹ ಸಂಖ್ಯೆಗಳು ಹೆಚ್ಚಿರುತ್ತದೆಯೋ ಅಂತಹ ಕಾನೂನುಗಳು ಮತ್ತು ಕಾರಾಗೃಹಗಳು ರಾಷ್ಟ್ರಕ್ಕೆ ಅಪಕೀರ್ತಿಯನ್ನು ತರುವ ಸಾಧ್ಯತೆ ಹೆಚ್ಚಾಗಿವೆ ಎಂದು ಆರ್.ಎಸ್. ಹೆಗಡೆ ಗಾಳಿ ತಿಳಿಸಿದರು. ವಕೀಲರ ಸಂಘದ ಅಧ್ಯಕ್ಷ ಎಸ್.ಪಿ. ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಕೆ.ಟಿ. ಗೌಡ ಮತ್ತಿತರರು ಕಾಯ್ದೆಯ ಸಾಧಕ-ಬಾಧಕ ಬಗ್ಗೆ ಮಾತನಾಡಿದರು. ಜಿಲ್ಲಾ ವಕೀಲರ ಸಂಘದ ಹಿರಿಯ ಮತ್ತು ಕಿರಿಯ ನ್ಯಾಯವಾದಿಗಳು ಮತ್ತು ಸ್ಥಳೀಯ ನ್ಯಾಯಾಧೀಶರುಗಳು ವಿಚಾರ ಸಂಕಿರಣದಲ್ಲಿ ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಅ.16ರ CJPಯ ಪ್ರತಿಭಟನೆಗೆ ತಡೆ ನೀಡಲು ಹೈಕೋರ್ಟ್ ನಕಾರ!

ಕಾಕ್ರೋಚ್ ಜನತಾ ಪಾರ್ಟಿ, ಕಾಂಗ್ರೆಸ್ ಎರಡೂ ಒಂದೇ; ಇಲ್ಲಿ ನಿಮ್ಮನ್ನು ಯಾರೂ ಬಂಧಿಸಲ್ಲ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ!

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

Indian Stock Market: ಕೊನೆಗೂ ಪುಟಿದಿದ್ದ ಭಾರತೀಯ ಷೇರು ಮಾರುಕಟ್ಟೆ, ಸೆನ್ಸೆಕ್ಸ್ ದಾಖಲೆಯ ಏರಿಕೆ