ಉತ್ತರ ಕನ್ನಡ

ಭಯೋತ್ಪಾದನೆ ಖಂಡನೆ

ಕುಮಟಾ:  ಹೈದರಾಬಾದ್‌ನಲ್ಲಿ ಅವಳಿ ಬಾಂಬ್ ಸ್ಫೋಟಿಸಿ 22ಕ್ಕೂ ಅಧಿಕ ಜನರು ಸಾವಿಗೀಡಾಗಿದ್ದು, ನೂರಾರು ಮಂದಿ ಗಾಯಗೊಂಡ ಘಟನೆ ದೇಶದ ಜನರನ್ನು ದಿಗ್ಭ್ರಮೆಗೊಳಿಸಿದೆ. ಎಲ್ಲ ವರ್ಗದ ಜನರೂ ಆತಂಕಗೊಂಡಿದ್ದಾರೆ. ಆಡಳಿತ ವ್ಯವಸ್ಥೆ ಬಿಗಿಯಾಗಿಲ್ಲದ ಕಾರಣ ಆಗಾಗ ಭಯೋತ್ಪಾದನೆ ಚಟುವಟಿಕೆ ನಡೆದು ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಉಗ್ರರನ್ನು ಶೀಘ್ರ ಬಂಧಿಸಿ, ಶಿಕ್ಷೆಗೆ ಗುರಿಪಡಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದ್ದಾರೆ. ವಿಹಿಂಪ ಜಿಲ್ಲಾ ಸಂಚಾಲಕ ಪರಮೇಶ್ವರ ಹೆಗಡೆ, ಎಂ.ಜಿ. ಭಟ್ಟ, ಬಜರಂಗದಳ ಜಿಲ್ಲಾ ಸಂಚಾಲಕ ಗೌರೀಶ ಧಾರೇಶ್ವರ, ಶ್ರೀಧರ ಎನ್. ಹರಿಕಾಂತ್ರ, ನಾಗರಾಜ ಎಸ್. ಹಣಿ, ಅಕ್ಷಯ ಕೆ. ನಾಯ್ಕ, ಮಹಾದೇವ ಪಟಗಾರ, ವಿಶ್ವನಾಥ ನಾಯ್ಕ, ಗಜಾನನ ನಾಯ್ಕ, ಸಾಗರ ನಾಯ್ಕ, ಶಂಕರ ಉಪ್ಪಾರ, ಅಣ್ಣಪ್ಪ ನಾಯ್ಕ ಹಾಗೂ ಬಜರಂಗದಳದ ಕಾರ್ಯಕರ್ತರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!