ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಉತ್ತರ ಕನ್ನಡ

ಕ್ರೂಸರ್ ಡಿಕ್ಕಿ: ಕಡವೆ ಸಾವು

Parashurama
Updated On : 29 Jan 2013, 12:00 pm

ಶಿರಸಿ: ಹುಲಿ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಅಂಬಿಕಾನಗರ ಸಮೀಪ ರಸ್ತೆಯಲ್ಲಿ ಹೋಗುತ್ತಿದ್ದ ಕಡವೆಗೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕಡವೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಡಿಕ್ಕಿ ಹೊಡೆದ ವಾಹನವನ್ನು (ಕೆಎ 31-6391) ವನ್ಯಜೀವಿ ವಿಭಾಗದ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದು, ಚಾಲಕನನ್ನು ಬಂಧಿಸಲಾಗಿದೆ. ಹುಲಿ ಸಂರಕ್ಷಿತ ಅರಣ್ಯ ಅಥವಾ ಅಭಯಾರಣ್ಯದಲ್ಲಿ ಕಾಡುಪ್ರಾಣಿಗಳಿಗೆ ಆದ್ಯತೆ. ವಾಹನಗಳು ಗಂಟೆಗೆ 40 ಕಿ.ಮೀ.ಗಿಂತಲೂ ಅಧಿಕ ವೇಗದಲ್ಲಿ ಚಲಿಸುತ್ತದೆ ಎಂಬುದು ಸ್ಥಳೀಯರ ಆರೋಪ.
ಕಡವೆಗೆ ಡಿಕ್ಕಿ ಹೊಡೆದಿರುವುದು ವನ್ಯಜೀವಿ ಕಾನೂನಿನಲ್ಲಿ ಗಂಭೀರ ಅಪರಾಧ. ಈ ಕುರಿತು ಸಿಸಿಎಫ್ ಅವರ ಗಮನ ಸೆಳೆದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚಿಸುತ್ತೇನೆ. ಬೇಕಾಬಿಟ್ಟಿ ಪ್ರವಾಸೋದ್ಯಮಕ್ಕೆ ಕಡಿವಾಣ ಹಾಕಬೇಕೆಂದು ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಅಶೀಸರ 'ಕನ್ನಡಪ್ರಭ'ಕ್ಕೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments