ಉತ್ತರ ಕನ್ನಡ

ಜೆಡಿಎಸ್‌ನಲ್ಲಿ ಸ್ಪಂದನಶೀಲ ನಾಯಕರು




ಕುಮಟಾ:  ಜನತಂತ್ರದ ಅತಿ ದೊಡ್ಡ ಶಕ್ತಿ ನಾಯಕರು. ಜೆಡಿಎಸ್‌ನಲ್ಲಿ ಸ್ಪಂದನಶೀಲ ನಾಯಕರಿದ್ದಾರೆ, ಸುಲಭವಾಗಿ ಜನರ ಸಂಪರ್ಕಕ್ಕೆ ಸಿಗುತ್ತಾರೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಅಭ್ಯರ್ಥಿಗಳನ್ನೇ ಆಯ್ಕೆ ಮಾಡುವಂತೆ ಜೆಡಿಎಸ್ ವಕ್ತಾರ ವೈ.ಎಸ್.ವಿ. ದತ್ತಾ ಮನವಿ ಮಾಡಿದರು.
ಸೋಮವಾರ ಸಂಜೆ ಇಲ್ಲಿಯ ಹವ್ಯಕ ಸಭಾಭವನದಲ್ಲಿ ಜರುಗಿದ ಜನತಾದಳ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕಿ ಸೋನಿಯಾರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರಂಥವರೇ ದಿನಗಟ್ಟಲೆ ಕಾಯಬೇಕಾಗಿದೆ. ರಾಹುಲ್ ಗಾಂಧಿ ಸಿಗಬೇಕಾದರೆ ಅದಕ್ಕಿಂತಲೂ ಹೆಚ್ಚು ಕಾಯಬೇಕು. ಜನಸಾಮಾನ್ಯರು ಅವರನ್ನು ಭೇಟಿಯಾಗಿ ದುಃಖ-ದುಮ್ಮಾನ ಹೇಳಿಕೊಳ್ಳುವುದು ಸಾಧ್ಯವೇ? ಸುಲಭವಾಗಿ ಭೇಟಿಗೆ ಸಿಗುವ ನಾಯಕರನ್ನೇ ಮತದಾರರು ಆಯ್ಕೆ ಮಾಡಬೇಕು. ರಾಜ್ಯ ರಾಜಕಾರಣದಲ್ಲಿ ಪ್ರಾದೇಶಿಕ ಪಕ್ಷಗಳತ್ತ ಒಲವು ಹೆಚ್ಚುತ್ತಿದೆ ಎಂದರು.
ಬಿಜೆಪಿ ಬಯ್ಯಲಾಗದಷ್ಟು ಕೆಟ್ಟು ಹೋಗಿದೆ ಎಂದ ದತ್ತಾ, ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಂಡರು. ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದನ್ನು ಬಿಟ್ಟು ಸಾಮರಸ್ಯದ ನಡಿಗೆ ಮಾಡುವುದರಲ್ಲಿ ನಿರತವಾಗಿದೆ ಎಂದು ಆರೋಪಿಸಿದರು. ವೇದಿಕೆಯಲ್ಲಿ ಶಾಸಕ ದಿನಕರ ಶೆಟ್ಟಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರಭಾಕರ ರಾಣೆ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಹೆಗಡೆ, ಪ್ರಮುಖರಾದ ಬಿ.ಆರ್. ನಾಯ್ಕ, ಗಣಪಯ್ಯ ಗೌಡ, ಹರೀಶ ನಾಯ್ಕ, ಜಯವಂತ ಪಟಗಾರ, ಇನಾಯುತುಲ್ಲಾ ಶಾಬಂದ್ರಿ, ಪ್ರದೀಪ ನಾಯಕ, ರಾಮು ಕೆಂಚನ್ ಇದ್ದರು. ಕ್ಷೇತ್ರಾಧ್ಯಕ್ಷ ನೀಲಪ್ಪ ಗೌಡ ಪ್ರಾಸ್ತಾವಿಕ ಮಾತನಾಡಿದರು. ರಾಜು ಪಟಗಾರ ಸ್ವಾಗತಿಸಿ, ನಿರೂಪಿಸಿದರು. ಸಮಾರಂಭದಲ್ಲಿ ಅನೇಕ ಕಾರ್ಯಕರ್ತರು ಜೆಡಿಎಸ್ ಸೇರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!