ನೀಲಕಂಠ ಹೆಗಡೆ ನಿಧನ
ಶಿರಸಿ: ತಾಲೂಕಿನ ಹೆಗಡೆಕಟ್ಟಾದ ನೀಲಕಂಠ ಗೋಪಾಲಕೃಷ್ಣ ಹೆಗಡೆ ಮರಿಯಜ್ಜನ್ (73) ಅವರು ಮಾ. 5ರಂದು ನಿಧನರಾದರು. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಅಲ್ಲಿಯೆ ಅವರು ಕೊನೆಯುಸಿರೆಳೆದರು. ದಿ. ರಾಮಕೃಷ್ಣ ಹೆಗಡೆ ಅಭಿಮಾನಿಗಳಾಗಿದ್ದ ಅವರು, ಸಾರ್ವಜನಿಕ ಜೀವನದಲ್ಲಿ ತಮ್ಮದೇ ನಿಲುವಿನ ವ್ಯಕ್ತಿತ್ವವನ್ನು ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ರಾಜಕೀಯ ಕ್ಷೇತ್ರದಲ್ಲೂ ಕಾರ್ಯನಿರ್ವಹಿಸಿದ್ದರು. ಶಿರಸಿ ತಾಲೂಕು ಬೋರ್ಡ್ನ ಅಧ್ಯಕ್ಷರಾಗಿ ಕಾರ್ಯನಿರ್ವಸಿದ್ದ ಅವರು ಆಗಿನ ಜನತಾ ಪಕ್ಷದ ಶಿರಸಿ ತಾಲೂಕು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ನೀಲಕಂಠ ಹೆಗಡೆ ಅವರ ನಿಧನಕ್ಕೆ ಮಾಜಿ ಶಾಸಕ ಉಮೇಶ ಭಟ್ ಮತ್ತು ಜಿಪಂ ಮಾಜಿ ಜಿ.ಎನ್. ಹೆಗಡೆ ಮುರೇಗಾರ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.