ಜವಾಬ್ದಾರಿ ಇದ್ದರೆ ಅಭಿವೃದ್ಧಿ: ಶ್ರೀಧರ ಗುಮ್ಮಾನಿ
ಯಲ್ಲಾಪುರ: ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಸಮಾನ ಅವಕಾಶಗಳನ್ನು ಕಲ್ಪಿಸಿದರೆ, ಮಕ್ಕಳನ್ನು ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡಲು ಸಾಧ್ಯವೆಂದು ಅನಂತ ವೇದ ಪ್ರತಿಷ್ಠಾನದ ಅಧ್ಯಕ್ಷ ಶ್ರೀಧರ ಗುಮ್ಮಾನಿ ಹೇಳಿದರು.
ಅವರು ಸೂಳಗಾರ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಶಾಲೆ ಅಭಿವೃದ್ಧಿ ಹೊಂದಬೇಕಾದರೆ ಮಕ್ಕಳು, ಶಿಕ್ಷಕರು ಹಾಗೂ ಪಾಲಕರು ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ನಂದೊಳ್ಳಿ ಗ್ರಾಪಂ ಅಧ್ಯಕ್ಷ ಟಿ.ಆರ್. ಹೆಗಡೆ ಮಾತನಾಡಿ, ನಂದೊಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಲ್ಲಿ ಉತ್ತಮ ಸಾಧನೆ ಮಾಡಿದ ಶಾಲೆಗೆ ಗ್ರಾಪಂದಿಂದ ಪ್ರಶಸ್ತಿ ನೀಡುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿ, ಪದೋನ್ನತಿ ಹೊಂದಿದ ಶಿಕ್ಷಕರಾದ ಎಸ್.ಬಿ. ನಾಯಕ ಹಾಗೂ ಸುಧಾಕರ್ ಜಿ. ನಾಯಕ ಅವರನ್ನು ಗೌರವಿಸಲಾಯಿತು. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ದೈಹಿಕ ಶಿಕ್ಷಣ ಪರಿವೀಕ್ಷಕ ರವೀಂದ್ರ ಕಾಪ್ಸೆ, ಗ್ರಾಪಂ ಸದಸ್ಯೆ ಗೀತಾ ಭಟ್ಟ, ಎಸ್ಡಿಎಂಸಿ ಅಧ್ಯಕ್ಷ ಸುಬ್ರಾಯ ಗುಮ್ಮಾನಿ ಹಾಗೂ ಸದಸ್ಯ ಮಹಾಬಲೇಶ್ವರ ಭಟ್ಟ, ನಂದೊಳ್ಳಿ ಎಸ್ಡಿಎಂಸಿ ಅಧ್ಯಕ್ಷ ಎಂ.ಎನ್. ಭಟ್ಟ, ಪ್ರಮುಖರಾದ ರಾಮಕೃಷ್ಣ ಭಟ್ಟ ಬಿದ್ರೆಪಾಲ, ಚಿದಂಬರ ಭಟ್ಟ, ಸಿಆರ್ಪಿ ಶಿವಲೀಲಾ ಹುಣಸಗಿ, ಶಿಕ್ಷಕಿ ಸುನಂದಾ ಪಾಟಣಕರ್ ಉಪಸ್ಥಿತರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.