ಆನಂದ ನೇತೃತ್ವದಲ್ಲಿ ಬಿಜೆಪಿ ವಿಜಯೋತ್ಸವ
ಕಾರವಾರ: ನಗರಸಭೆ ಚುನಾವಣೆಯ 13 ವಾರ್ಡ್ಗಳಲ್ಲಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಸಚಿವ ಆನಂದ ಅಸ್ನೋಟಿಕರ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿ ವಿಜಯೋತ್ಸವವನ್ನು ಆಚರಿಸಿದರು. ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕೇಂದ್ರವಾದ ನಗರದ ಸೆಂಟ್ ಜೋಸೆಫ್ ಪ್ರೌಢಶಾಲೆಯ ಹೊರಗಡೆ ಬಿಜೆಪಿ ಕಾರ್ಯಕರ್ತರು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದರು. ಫಲಿತಾಂಶ ಬೆಳಗ್ಗೆ 10 ಗಂಟೆಗೆ ಹೊರ ಬೀಳುತ್ತಿದ್ದಂತೆಯೇ ಕಾರ್ಯಕರ್ತರು ಜಯಶಾಲಿಯಾದ ಅಭ್ಯರ್ಥಿಗಳಿಗೆ ಹೂವಿನ ಹಾರಗಳನ್ನು ಹಾಕಿ ಅಭಿನಂದನೆ ಸಲ್ಲಿಸಿದರು. ನಂತರ ಕಾರ್ಯಕರ್ತರು ಹಾಗೂ ಜಯಶಾಲಿಯಾದ ಅಭ್ಯರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಇದೇ ಸಂದರ್ಭದಲ್ಲಿ ಸಚಿವ ಆನಂದ ಅಸ್ನೋಟಿಕರ್ ಜತೆಯಾಗಿ ಪ್ರಮುಖ ಸರ್ಕಲ್ಗಳಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಗೆದ್ದ ಅಭ್ಯರ್ಥಿಗಳಾದ ಗಣಪತಿ ಉಳ್ವೇಕರ್, ಗುರುನಾಥ ಉಳ್ವೇಕರ್, ನಿತೀನ್ ಪಿಕಳೆ, ಅನಿಲ್ ನಾಯ್ಕ, ನಂದು ಸಾವಂತ ಮತ್ತಿತರರು ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.