ಕುಮಟಾ: ಹೆಸ್ಕಾಂ ಗ್ರಾಹಕ ಸಂವಾದ ಸಭೆ
ಕುಮಟಾ: ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನಿರ್ದೇಶನದಂತೆ ಕುಮಟಾ ಉಪ ವಿಭಾಗದಲ್ಲಿ ಪ್ರತಿ ಎರಡು ತಿಂಗಳಿಗೊಮ್ಮೆ ಗ್ರಾಹಕ-ಸಂವಾದ ಸಭೆ ಏರ್ಪಡಿಸುತ್ತಿದೆ. ಮಾ. 21ರಂದು ಮುಂಜಾನೆ 11 ಘಂಟೆಗೆ ಕುಮಟಾ ಹೆಸ್ಕಾಂ ಕಚೇರಿಯಲ್ಲಿ ಸಭೆ ನಡೆಯಲಿದೆ. ಗ್ರಾಹಕರು ತಮ್ಮ ಸಮಸ್ಯೆಗಳನ್ನು ನಿವೇದಿಸಿಕೊಂಡು ಇಲಾಖೆ ಅಧಿಕಾರಿಗಳೊಡನೆ ಸಮಾಲೋಚಿಸಿ ಬಗೆಹರಿಸಿಕೊಳ್ಳಬೇಕೆಂದು ಕುಮಟಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆರ್.ಎನ್. ಪಟಗಾರ ಮನವಿ ಮಾಡಿದ್ದಾರೆ. ಮಾಹಿತಿಗೆ ಕಚೇರಿ ವೇಳೆಯಲ್ಲಿ ದೂ. 08386-222165, 224865 ಸಂಪರ್ಕಿಸಲು ಕೋರಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.