ಉತ್ತರ ಕನ್ನಡ

ಬಸ್ ಸೌಕರ್ಯಕ್ಕಾಗಿ ಹೆದ್ದಾರಿಯಲ್ಲಿ ಪ್ರತಿಭಟನೆ

ಮುಂಡಗೋಡ: ಕೋಡಂಬಿ, ಜೋಡಿಕಟ್ಟಾ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಸೋಮವಾರ ತಾಲೂಕಿನ ಪಾಳಾ ಕ್ರಾಸ್ ಶಿರಸಿ-ಹುಬ್ಬಳ್ಳಿ ಹೆದ್ದಾರಿಯಲ್ಲಿ ಸುಮಾರು 1 ಗಂಟೆ ಕಾಲ ರಸ್ತೆ ತಡೆ ನಡೆಸಿದ ಘಟನೆ ನಡೆಯಿತು.
ನಿತ್ಯ ಮಾಧ್ಯಮಗಳಲ್ಲಿ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅತ್ಯಾಚಾರ ಕೃತ್ಯ ಜನತೆಯಲ್ಲಿ ಭಯ ಸೃಷ್ಟಿಸಿದೆ. ಜೋಡಿಕಟ್ಟಾ ಗ್ರಾಮ ದಟ್ಟ ಅರಣ್ಯದ ನಡುವೆ ಇದ್ದು, ಯಾವುದೇ ಸಾರಿಗೆ ವ್ಯವಸ್ಥೆ ಇಲ್ಲ.  ತಕ್ಷಣ ಈ ಭಾಗಕ್ಕೆ ಸಾರಿಗೆ ಸಂಸ್ಥೆ ಬಸ್ ಬಿಡಬೇಕು ಎಂದು ಪ್ರತಿಭಟನೆ ನಡೆಸಿದರು.
ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಸ್ತೆ ತಡೆ ನಿಲ್ಲಿಸುವಂತೆ ಮನವಿ ಮಾಡಿದರು. ಇದಕ್ಕೆ ಬಗ್ಗದ ಪ್ರತಿಭಟನಾನಿರತರು, ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರಬೇಕು ಎಂದು ಪಟ್ಟುಹಿಡಿದರು. ತದನಂತರ ಸಾರಿಗೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಾರದೊಳಗಾಗಿ ಬಸ್ ಬಿಡುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೌದಿಯಲ್ಲಿ ಬಸ್–ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಘೋರ ದುರಂತ: 45 ಮಂದಿ ಭಾರತೀಯ ಯಾತ್ರಿಕರು ದುರ್ಮರಣ, ಸಹಾಯವಾಣಿ ಆರಂಭ

"ನನಗೆ ಚಿಂತೆಯೇ ಇಲ್ಲ. ಅಲ್ಲಾಹ್ ಜೀವ ಕೊಟ್ಟಿದ್ದಾನೆ.. ಅವನೇ ತೆಗೆದುಕೊಳ್ಳುತ್ತಾನೆ": ಕೋರ್ಟ್ ತೀರ್ಪಿಗೂ ಮೊದಲು ಶೇಖ್ ಹಸೀನಾ!

ಬಿಹಾರದಲ್ಲಿ ಶಾಕಿಂಗ್ ಟ್ವಿಸ್ಟ್: ಎನ್ ಡಿಎಗೆ ಲಾಲೂ ಪ್ರಸಾದ್ ಪುತ್ರ ತೇಜ್ ಪ್ರತಾಪ್ ಯಾದವ್ ಬೆಂಬಲ!

ಬಿಹಾರ: ನ. 20ಕ್ಕೆ ನೂತನ ಸಿಎಂ ಪದ ಗ್ರಹಣ, ಪ್ರಧಾನಿ ಮೋದಿ ಸಮಾರಂಭದಲ್ಲಿ ಭಾಗಿ!

ಸಂಪುಟ ವಿಸ್ತರಣೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್: ಸಿಎಂ ಸಿದ್ದರಾಮಯ್ಯ ಓಟಕ್ಕೆ 'ಬಂಡೆ' ಬ್ರೇಕ್! KN ರಾಜಣ್ಣ ಕಮ್ ಬ್ಯಾಕ್?

SCROLL FOR NEXT