ಉತ್ತರ ಕನ್ನಡ

ರೈತರ ಸಮಸ್ಯೆ ಪರಿಹರಿಸಿ: ಮನವಿ

ಮುಂಡಗೋಡ: ಮಳೆಯ ಅಭಾವದಿಂದಾಗಿ ರೈತರ ಬೆಳೆ ನಾಶ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗಿದ್ದು, ಕೂಡಲೇ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಕಾತೂರ ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರು ಗುರುವಾರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಅರ್ಪಿಸಿದರು. ಮಳೆಯ ಕೊರತೆಯಿಂದಾಗಿ ಈಗಾಗಲೇ ಸಾಕಷ್ಟು ಪ್ರಮಾಣದ ಬೆಳೆ ಹಾನಿಗೊಳಗಾಗಿದೆ. ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಮೇವು ಕೂಡ ಸಿಗದಿರುವುದರಿಂದ ರೈತ ವರ್ಗ ತೀವ್ರ ತೊಂದರೆ ಅನುಭವಿಸುವಂತಾಗಿದೆ. ತಕ್ಷಣ ಸಮಸ್ಯೆ ಪರಿಹಾರಕ್ಕಾಗಿ ಇಲ್ಲಿ ಗೋ ಶಾಲೆ ಪ್ರಾರಂಭಿಸಬೇಕು. ಬಡ ಕೂಲಿಕಾರರಿಗೆ ಹಾಗೂ ರೈತರಿಗೆ ಉದ್ಯೋಗ ಸೃಷ್ಟಿಸಬೇಕು. ಕೆಲವೊಂದು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಬೇಕು. ಬರಗಾಲ ಛಾಯೆ ಆವರಿಸಿರುವುದನ್ನು ನಿವಾರಿಸಲು ರೈತರಿಗೆ ಪರ್ಯಾಯ ಬೆಳೆ ಬೆಳೆಯಲು ಉಚಿತವಾಗಿ ಬಿತ್ತನೆ ಬೀಜ, ಗೊಬ್ಬರ, ಕ್ರಿಮಿನಾಶಕ ಪೂರೈಸಬೇಕು. ಸರ್ಕಾರ ತಕ್ಷಣ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಾತು ಬನ್ಸೋಡೆ, ಚಿದಾನಂದ ಹರಿಜನ, ಲೋಹಿತ ಮಟ್ಟಿಮನಿ, ಹನ್ಮಂತ ಆರೆಗೊಪ್ಪ, ಭೀಮಣ್ಣ ತಳವಾರ, ಎನ್.ಎಸ್. ಬಾಗಿಲದವರ, ಫಕ್ಕೀರಪ್ಪ ಹೊಸಮನಿ ಮುಂತಾದವರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!