ಉತ್ತರ ಕನ್ನಡ

ಘಟ್ಟದ ಮೇಲೆ ಬಿರುಸಾದ ಮಳೆ

ಕನ್ನಡಪ್ರಭ ವಾರ್ತೆ, ಶಿರಸಿ, ಜು. 14
ಘಟ್ಟದ ಮೇಲಿನ ಪ್ರದೇಶಗಳಲ್ಲಿ ಮಳೆ ಮತ್ತಷ್ಟು ಬಿರುಸು ಪಡೆದಿದೆ. ಇದರಿಂದಾಗಿ ಜನಜೀವನ ಸ್ವಲ್ಪ ಮಟ್ಟಿಗೆ ಅಸ್ತವ್ಯಸ್ತವಾಗಿದೆ. ಮಳೆಯಿಂದ ಯಾವುದೇ ರೀತಿಯ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ ತಾಲೂಕುಗಳಲ್ಲಿ ಮಳೆ ಆರ್ಭಟ ಆರಂಭವಾಗಿದೆ. ಹಳಿಯಾಳ, ಮುಂಡಗೋಡ ಹಾಗೂ ಜೋಯಿಡಾಗಳಲ್ಲೂ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ. ಮಳೆಯಿಂದಾಗಿ ಗ್ರಾಮೀಣ ಭಾಗದ ಜನರು ಬವಣೆ ಅನುಭವಿಸುವಂತಾಗಿದೆ. ಘಟ್ಟದ ಮೇಲಿನ ತಾಲೂಕುಗಳಲ್ಲಿಯೇ ಸಿದ್ದಾಪುರ ತಾಲೂಕಿನಲ್ಲಿ ಮಳೆಯ ಪ್ರಮಾಣ ತೀವ್ರವಾಗಿತ್ತು. ದಿನವಹಿ ಸುರಿದ ಮಳೆ ಜನಸಾಮಾನ್ಯರು ಮನೆಯಿಂದ ಹೊರಹೋಗದಂತೆ ಮಾಡಿತು.
ಶಿರಸಿ ತಾಲೂಕಿನಲ್ಲಿಯೂ ಮಳೆ ಜೋರಾಗಿತ್ತು. ಶಿರಸಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಳೆ ಎಡಬಿಡದೇ ಸುರಿದ ಪ್ರಮಾಣ ರಸ್ತೆ, ಚರಂಡಿಗಳು, ಹೊಳೆ, ಹಳ್ಳಗಳು ತುಂಬಿ ಹರಿಯಲು ಆರಂಭಿಸಿವೆ. ಶಾಲ್ಮಲಾ ಹಾಗೂ ಅಘನಾಶಿನಿ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಂತರ್ಜಲ ಮಟ್ಟದಲ್ಲಿಯೂ ನಿಧಾನವಾಗಿ ಏರಿಕೆ ಕಂಡುಬರುತ್ತಿರುವ ಕಾರಣ ಜನಸಾಮಾನ್ಯರು ನಿಟ್ಟುಸಿರು ಬಿಡಲು ಆರಂಭಿಸಿದ್ದಾರೆ.
ಶಿರಸಿ ನಗರ, ಗ್ರಾಮೀಣ ಪ್ರದೇಶಗಳು, ಸಿದ್ದಾಪುರ ತಾಲೂಕಿನ ಗ್ರಾಮೀಣ ಪ್ರದೇಶಗಳು, ಯಲ್ಲಾಪುರ ತಾಲೂಕಿನ ಕೆಲ ಗ್ರಾಮೀಣ ಪ್ರದೇಶಗಳಲ್ಲಿ ಮಳೆಯಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಆಗಾಗ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗುತ್ತಿದ್ದ ಕಾರಣ ಜನತೆ ಹೆಸ್ಕಾಂಗೆ ಹಿಡಿಶಾಪ ಹಾಕಿದರು.
ಶಿರಸಿ ತಾಲೂಕಿನಲ್ಲಿ 24 ತಾಸುಗಳ ಅವಧಿಯಲ್ಲಿ 55.5 ಮಿ.ಮೀ ಮಳೆ ಸುರಿದಿದೆ. ಈ ವರ್ಷ ಒಟ್ಟು 729.5 ಮಿ.ಮೀ ಮಳೆ ಸುರಿದಿದೆ. ಕಳೆದ ವರ್ಷ ಜು. 14ರಂದು 10.5 ಮಿ.ಮೀ ಮಳೆಯಾಗಿದ್ದರೆ ಕಳೆದ ವರ್ಷ ಒಟ್ಟು 1358.5 ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ದಿನದ ಮಳೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದರೆ ಒಟ್ಟು ಮಳೆಯಲ್ಲಿ ಶೇ. 40ರಷ್ಟು ಕಡಿಮೆಯಾಗಿದೆ. ಸಿದ್ದಾಪುರ ತಾಲೂಕಿನಲ್ಲಿ 24 ಗಂಟೆಗಳಲ್ಲಿ ಮಳೆ ಬಿರುಸಾಗಿದ್ದು ಒಟ್ಟು 118.2 ಮಿ.ಮೀ ಮಳೆ ಸುರಿದಿದೆ. ಒಟ್ಟು 916.2 ಮಿ.ಮೀ ಮಳೆ ಸುರಿದಿದೆ. ಕಳೆದ ವರ್ಷ 23.6 ಮಿ.ಮೀ ಮಳೆಯಾಗಿತ್ತು. ಒಟ್ಟು 1491.4 ಮಿ.ಮೀ ಮಳೆ ಸುರಿದಿತ್ತು. ಕಳೆದ ವರ್ಷಕ್ಕಿಂತ ಶೇ. 35ರಷ್ಟು ಮಳೆ ಕಡಿಮೆಯಾಗಿದೆ.
ಯಲ್ಲಾಪುರ: ತಾಲೂಕಿನಲ್ಲಿ 24 ಗಂಟೆಗಳಲ್ಲಿ 18.0 ಮಿ.ಮೀ ಮಳೆ ಸುರಿದಿದೆ. ಒಟ್ಟು 570.6 ಮಿ.ಮೀ ಮಳೆಯಾಗಿದೆ. ಕಳೆದ ವರ್ಷ ಇದೇ ಸಮಯದಲ್ಲಿ 15.2 ಮಿ.ಮೀ ಮಳೆ ಸುದಿದ್ದು ಒಟ್ಟು 1025.8 ಮಿ.ಮೀ ಮಳೆಯಾಗಿತ್ತು. ತಾಲೂಕಿನಾದ್ಯಂತ ಕಳೆದ ವರ್ಷಕ್ಕಿಂತ ಶೇ. 50ರಷ್ಟು ಕಡಿಮೆ ಪ್ರಮಾಣದ ಮಳೆಯಾಗಿದೆ.
ಮುಂಡಗೋಡ: ತಾಲೂಕಿನಲ್ಲಿ 24 ಗಂಟೆಗಳಲ್ಲಿ 6.8 ಮಿ.ಮೀ ಮಳೆಯಾಗಿದೆ. ಒಟ್ಟು 320.8 ಮಿ.ಮೀ ಮಳೆ ಸುರಿದಿದೆ. ಕಳೆದ ವರ್ಷ 5.6 ಮಿ.ಮೀ ಮಳೆ ಸುರಿದಿದ್ದು, ಒಟ್ಟು 389.7 ಮಿ.ಮೀ ಮಳೆ ಸುರಿದಿತ್ತು. ತಾಲೂಕಿನಲ್ಲಿ ಕಳೆದ ವರ್ಷಕ್ಕಿಂತ ಶೇ. 15ರಷ್ಟು ಮಳೆ ಕಡಿಮೆಯಾಗಿದೆ.
ಹಳಿಯಾಳ ಹಾಗೂ ಜೋಯಿಡಾ ತಾಲೂಕುಗಳಲ್ಲಿಯೂ ಮಳೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಜೋಯಿಡಾ ತಾಲೂಕಿನ ಪಶ್ಚಿಮ ಭಾಗದಲ್ಲಿ ಮಳೆ ತೀವ್ರವಾಗಿದೆ. ಮಳೆಯಿಂದ ಯಾವುದೇ ರೀತಿಯ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಮುಂದಿನ ಎರಡು ದಿನಗಳ ಕಾಲ ಮಳೆಯ ಪ್ರಮಾಣದಲ್ಲಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ