ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ 
ದೇಶ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀಟ್ ರದ್ದು, ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಮನ್ನಾ

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹಲವು ಆಶೋತ್ತರಗಳನ್ನು ಹೊತ್ತ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ನೀಟ್ ರದ್ದುಗೊಳಿಸುವುದಾಗಿ...

ನವದೆಹಲಿ: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹಲವು ಆಶೋತ್ತರಗಳನ್ನು ಹೊತ್ತ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ನೀಟ್ ರದ್ದುಗೊಳಿಸುವುದಾಗಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಭರವಸೆ ನೀಡಿದೆ.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ಕೇಂದ್ರ ಸರ್ಕಾರ ನಡೆಸುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್‌)ಯನ್ನು ರದ್ದುಗೊಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.
ಶಾಲಾ ಶಿಕ್ಷಣವನ್ನು ಕೇಂದ್ರ ಪಟ್ಟಿಯಿಂದ ರಾಜ್ಯ ಪಟ್ಟಿಗೆ ಸೇರಿಸುವ ಹಾಗೂ ಉನ್ನತ ಶಿಕ್ಷಣವನ್ನು ಕೇಂದ್ರ ಪಟ್ಟಿಯಲ್ಲೇ ಉಳಿಸಿಕೊಳ್ಳುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.
ಇಂದು ದೆಹಲಿಯಲ್ಲಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಈ ಪ್ರಣಾಳಿಕೆ ಕಾಂಗ್ರೆಸ್ ಗೆ ಮುಂದಿನ ಹೆಜ್ಜೆಯಿಡಲು ನಾಂದಿಯಾಗಲಿದೆ. ವರ್ಷದ ಹಿಂದೆ ಪ್ರಣಾಳಿಕೆ ಸಿದ್ದಪಡಿಸಲು ಆರಂಭಿಸಿದಾಗ ದೇಶದ ಜನತೆಯ ಆಶೋತ್ತರಗಳನ್ನು ಈಡೇರಿಸಬೇಕೆಂದು ನಾನು ಹೇಳಿದ್ದೆ. ಇದರಲ್ಲಿ ನಾವು ಕೊಡುವ ಭರವಸೆಗಳು ಸತ್ಯವಾಗಿರುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!