ಸಂಗ್ರಹ ಚಿತ್ರ 
ದೇಶ

ಕಾಂಗ್ರೆಸ್​​ ಅಧ್ಯಕ್ಷ ರಾಹುಲ್​​ ಗಾಂಧಿ ಅಧಿಕೃತ ಆಸ್ತಿ ಎಷ್ಟು ಗೊತ್ತಾ?

ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ದಕ್ಷಿಣ ಭಾರತದ ಸ್ಪರ್ಧೆ ಖಚಿತವಾಗಿದ್ದು, ನಿರೀಕ್ಷೆಯಂತೆಯೇ ಕೇರಳದ ವಯನಾಡ್ ನಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರಾಹುಲ್ ತಮ್ಮ ಅಧಿಕೃತ ಆಸ್ತಿ ವಿವರ ಕೂಡ ಸಲ್ಲಿಕೆ ಮಾಡಿದ್ದಾರೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ದಕ್ಷಿಣ ಭಾರತದ ಸ್ಪರ್ಧೆ ಖಚಿತವಾಗಿದ್ದು, ನಿರೀಕ್ಷೆಯಂತೆಯೇ ಕೇರಳದ ವಯನಾಡ್ ನಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರಾಹುಲ್ ತಮ್ಮ ಅಧಿಕೃತ ಆಸ್ತಿ ವಿವರ ಕೂಡ ಸಲ್ಲಿಕೆ ಮಾಡಿದ್ದಾರೆ.
ರಾಹುಲ್​​ ಗಾಂಧಿ ನಾಮಪತ್ರದ ಜತೆಗೆ ನೀಡಲಾಗಿರುವ ಅಫಿಡವಿಟ್ ನಲ್ಲಿ ತಮ್ಮ ಆಸ್ತಿ ವಿವರ ಘೋಷಿಸಿಕೊಂಡಿದ್ದು, ಕಳೆದ ಐದು ವರ್ಷದಲ್ಲಿ ರಾಹುಲ್ ಗಾಂಧಿ ಅವರ ಆಸ್ತಿಯಲ್ಲಿ 6.48 ಕೋಟಿ ರೂ. ಹೆಚ್ಚಾಗಿದೆ. ರಾಹುಲ್ ಗಾಂಧಿ ತಾವು ಒಟ್ಟು 15.09 ಕೋಟಿ ರೂ. ವೌಲ್ಯದ ಸ್ಥಿರ ಮತ್ತು ಚರಾಸ್ತಿಯನ್ನು ಹೊಂದಿರುವುದಾಗಿ ಅಫಿಡವಿಟ್ ನಲ್ಲಿ ಘೋಷಿಸಿದ್ದಾರೆ.
ಅಫಿಡವಿಟ್ ನಲ್ಲಿ  ರಾಹುಲ್ ಗಾಂಧಿ, 'ನಮ್ಮ ಕುಟುಂಬ ಸರ್ಕಾರಕ್ಕೆ ಯಾವುದೇ ಬಾಕಿ ನೀಡಬೇಕಿಲ್ಲ. ನಮ್ಮ ಮೇಲೆ ಐದು ಕ್ರಮಿನಿಲ್​​​​ ಕೇಸುಗಳು ದಾಖಲಾಗಿವೆ. ಜತೆಗೆ 40 ಸಾವಿರ ನಗದು, 2, 91,367 ಮೌಲ್ಯದ ಬಂಗಾರ, ಬೇರೆ ಸಂಸ್ಥೆಗಳಲ್ಲಿ 5,19,44,682 ರೂಪಾಯಿ ಹಣ ಹೂಡಿಕೆ ಮಾಡಲಾಗಿದೆ ಎಂದು ಘೋಷಿಸಿಕೊಂಡಿದ್ದಾರೆ.  ಸದ್ಯ ರಾಹುಲ್​​ ಗಾಂಧಿ 7,93,03,977 ರೂ ಚರಾಸ್ತಿ ಹೊಂದಿದ್ದು, 10,08,18,284 ರೂ ಸ್ಥಿರಾಸ್ತಿ ಹೊಂದಿದ್ದಾರೆ. ಅಲ್ಲದೇ ತನ್ನ ತಾಯಿ ಸೋನಿಯಾ ಗಾಂಧಿ ಅವರಿಂದ 5 ಲಕ್ಷ ಸಾಲ ಪಡೆದಿರುವುದಾಗಿ​​ ಹೇಳಿಕೊಂಡಿದ್ದಾರೆ.
ಇನ್ನು ವಯನಾಡ್ ಜೊತೆಗೆ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದಲೂ ಚುನಾವಣಾ ಕಣಕ್ಕಿಳಿದಿದ್ದಾರೆ. ವಯನಾಡ್‌ನಲ್ಲಿ ಎಪ್ರಿಲ್ 23ರಂದು ಮತದಾನ ನಡೆಯಲಿದ್ದರೆ ಅಮೇಠಿಯಲ್ಲಿ ಮೇ 6ರಂದು ಜನರು ಮತದಾನ ಮಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?