ನವದೆಹಲಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಆಯೋಗ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಚುನಾವಣಾ ಆಯೋಗ ಬಿಜೆಪಿಯ ಆಣತಿಯಂತೆ ಕಾರ್ಯನಿರ್ವಹಿಸುತ್ತಿದೆ ಎಂಬ ಮಮತಾ ಬ್ಯಾನರ್ಜಿ ಆರೋಪವನ್ನು ತಳ್ಳಿಹಾಕಿರುವ ಚುನಾವಣಾ ಆಯೋಗ, ನ್ಯಾಯಸಮ್ಮತ, ಮುಕ್ತ ಚುನಾವಣೆ ನಡೆಸುವುದಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆಯೋಗ ಹೇಳಿದೆ.