ನವದೆಹಲಿ: ನಮ್ಮ ವಿಶ್ವಾಸಾರ್ಹತೆಯನ್ನು ಯಾರಿಗೂ ಸಾಬೀತು ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.
ಚುನಾವಣಾ ಆಯೋಗ ಪಶ್ಚಿಮ ಬಂಗಾಲದ ನಾಲ್ಕು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿದ್ದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಯೋಗದ ವಿಶ್ವಾಸಾರ್ಹತೆಯನ್ನೇ ಪ್ರಶ್ನಿಸಿದ್ದರು. ಅಲ್ಲದೆ ಪಶ್ಚಿಮ ಬಂಗಾಳದಲ್ಲಿ ನ್ಯಾಯೋಚಿತ ಚುನಾವಣೆ ನಡೆಯುವ ಬಗ್ಗೆ ನಮಗೆ ಅನುಮಾನವಿದೆ, ಚುನಾವಣಾ ಆಯೋಗ ಬೇರೆ ಯಾರದೋ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ ಮತ್ತು ನಿಷ್ಪಕ್ಷಪಾತ ಕೆಲಸ ನಡೆಸುತ್ತಿಲ್ಲ ಎಂದು ದೂರಿದ್ದರು.
ದೀದಿ ಪ್ರತಿಕ್ರಿಯೆಗೆ ವ್ಯಾಪಕ ಪರ-ವಿರೋಧ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಇದೀಗ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಚುನಾವಣಾ ಆಯೋಗ, 'ನಮ್ಮ ವಿಶ್ವಾಸಾರ್ಹತೆಯನ್ನು ಸಾಬೀತು ಮಾಡುವ ಅಗತ್ಯವಿಲ್ಲ. ನಾವು ಯಾರಿಗೂ ನಮ್ಮ ಪ್ರಮಾಣಿಕತೆಯನ್ನು ಸಾಬೀತು ಪಡಿಸಿಬೇಕಾಗಿಲ್ಲ ಎಂದಿದೆ.