ಪ್ರಧಾನಿ ಮೋದಿ 
ದೇಶ

ಬಾಲಾಕೋಟ್ ವೈಮಾನಿಕ ದಾಳಿ ಹಿರೋಗಳಿಗೆ ನಿಮ್ಮ ಮೊದಲ ಮತ ಅರ್ಪಿಸಿ: ಯುವಜನತೆಗೆ ಪ್ರಧಾನಿ ಮೋದಿ ಕರೆ

ಪಾಕಿಸ್ತಾನದ ರಚನೆಗೆ ಕಾಂಗ್ರೆಸ್ ಹೊಣೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ಔಸಾ: ಪಾಕಿಸ್ತಾನದ ರಚನೆಗೆ ಕಾಂಗ್ರೆಸ್ ಹೊಣೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. 
ಮಹಾರಾಷ್ಟ್ರದಲ್ಲಿ ಚುನಾವಣಾ ಸಮಾವೇಶದಲ್ಲಿ ಯುವಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮ ಮೊದಲ ಮತವನ್ನು ಬಾಲಾಕೋಟ್ ನಲ್ಲಿ ಉಗ್ರರ ನೆಲೆ ಮೇಲೆ ವೈಮಾನಿಕ ದಾಳಿ ನಡೆಸಿದ ಹಿರೋಗಳಿಗೆ ಅರ್ಪಿಸಿ ಎಂದು ಕರೆ ನೀಡಿದ್ದಾರೆ. 
ವೈಮಾನಿಕ ದಾಳಿ ನಡೆಸಿದವರಿಗೆ ನಿಮ್ಮ ಮತ ಅರ್ಪಣೆಯಾಗಬಹುದೇ? ಎಂದು ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವ ಜನತೆಯನ್ನು ಕೇಳಿದ್ದಾರೆ. 
ಸ್ವಾತಂತ್ರ್ಯಾ ಪೂರ್ವದಲ್ಲಿ ಕಾಂಗ್ರೆಸ್ ನಾಯಕರು ವಿವೇಕದಿಂದ ವರ್ತಿಸಿದ್ದರೆ ಈ ಪಾಕಿಸ್ತಾನ ಹುಟ್ಟುತ್ತಿರಲಿಲ್ಲ, ಈಗ ಪಾಕಿಸ್ತಾನದ ಭಾಷೆಯನ್ನೇ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯೂ ಮಾತನಾಡುತ್ತಿದೆ, ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ ಬೇಕೆನ್ನುವವರೊಂದಿಗೆ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷ ಎನ್ ಸಿಪಿ ನಿಂತಿದೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 
ಇದೇ ವೇಳೆ ಬಿಜೆಪಿ ಸಾಧನೆಗಳ ಬಗ್ಗೆಯೂ ಮೋದಿ ಮಾತನಾಡಿದ್ದು, ಬಿಜೆಪಿ ಅಧಿಕಾರಾವಧಿಯಲ್ಲಿನ ನವ ಭಾರತ ಭಯೋತ್ಪಾದಕರನ್ನು ಅವರ ನೆಲದಲ್ಲೇ ಹೊಡೆದುರುಳಿಸುವ ತಾಕತ್ತು ಪ್ರದರ್ಶಿಸಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ