ದೇಶ

ರಾಯ್‍ಬರೇಲಿ: ವಿಶೇಷ ಪೂಜೆ ಬಳಿಕ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

Lingaraj Badiger
ಲಖನೌ: ಯುಪಿಎ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ಉತ್ತರ ಪ್ರದೇಶದ ರಾಯ್‍ಬರೇಲಿ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮುನ್ನ ಸೋನಿಯಾ ಗಾಂಧಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಭರ್ಜರಿ ರೋಡ್ ಶೋ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. 
ರಾಯ್ ಬರೇಲಿ ಕಾಂಗ್ರೆಸ್ ಕಚೇರಿಯಲ್ಲಿ ಸೋನಿಯಾ ಗಾಂಧಿ ಅವರು ಹವನ ನಡೆಸಿದರು. ಪುತ್ರ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕ ಗಾಂಧಿ ಸಾಥ್ ನೀಡಿದರು.
ಸೋನಿಯಾ ಗಾಂಧಿ ಅವರು 2004, 2006 (ಉಪ ಚುನಾವಣೆ), 2009 ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ರಾಯ್‍ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಈ ಮೂಲಕ ರಾಯ್‍ಬರೇಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಈ ಬಾರಿ ಬಿಜೆಪಿಯು ರಾಯ್‍ಬರೇಲಿಯನ್ನು ತನ್ನ ವಶಕ್ಕೆ ಪಡೆಯಲು ಯತ್ನಿಸುತ್ತಿದೆ.
ಕಾಂಗ್ರೆಸ್ ಪಕ್ಷದಿಂದ ಕಳೆದ ವರ್ಷ ಹೊರಬಂದು ಬಿಜೆಪಿ ಸೇರ್ಪಡೆಯಾದ ದಿನೇಶ್ ಪ್ರತಾಪ್ ಸಿಂಗ್ ಅವರು ಸೋನಿಯಾ ಗಾಂಧಿ ವಿರುದ್ಧ ಕಣಕ್ಕೆ ಇಳಿದಿದ್ದಾರೆ. ಇತ್ತ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‍ಪಿ) ಹಾಗೂ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ಮೈತ್ರಿ ಮಾಡಿಕೊಂಡಿವೆ. ಹೀಗಾಗಿ ಎರಡೂ ಪಕ್ಷಗಳು ಒಮ್ಮತದಿಂದ ರಾಯ್‍ಬರೇಲಿ ಹಾಗೂ ಅಮೇಥಿ ಲೋಕಸಭಾ ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಟ್ಟಿವೆ.
SCROLL FOR NEXT