ಸಂಗ್ರಹ ಚಿತ್ರ 
ದೇಶ

ನನಗೆ ಮತ ನೀಡಿ ಇಲ್ಲದಿದ್ದರೆ... ಎಂದು ಧಮ್ಕಿ ಹಾಕಿದ್ದ ಮನೇಕಾ ಗಾಂಧಿಗೆ ಷೋಕಾಸ್ ನೋಟಿಸ್!

ನಿಮಗೆ ಕೆಲಸ ಬೇಕಿದ್ದರೆ ನನಗೆ ಮತ ನೀಡಿ ಎಂದು ಮತದಾರರಿಗೆ ಎಚ್ಚರಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.

ಲಖನೌ: ನಿಮಗೆ ಕೆಲಸ ಬೇಕಿದ್ದರೆ ನನಗೆ ಮತ ನೀಡಿ ಎಂದು ಮತದಾರರಿಗೆ ಎಚ್ಚರಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಮನೇಕಾ ಗಾಂಧಿ ಅವರಿಗೆ ಷೋಕಾಸ್ ನೋಟಿಸ್ ನೀಡಲಾಗಿದೆ.
ಇಂದು ಉತ್ತರ ಪ್ರದೇಶದ ಸುಲ್ತಾನ್​ಪುರ್ ಲೋಕಸಭಾ ಕ್ಷೇತ್ರದ ಮುಸ್ಲಿಮರು ಪ್ರಾಬಲ್ಯವಿರುವ ತುರಬ್ ಖಾನಿ ಎಂಬ ಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಬಿಜೆಪಿ ಅಭ್ಯರ್ಥಿ ಮನೇಕಾ ಗಾಂಧಿ, ನೀವು ನನಗೆ ನೋಟು ಹಾಕದಿದ್ದರೆ ನಿಮಗೆ ನಾನು ಕೆಲಸ ಕೊಡುವುದಿಲ್ಲ ಎಂದು ಎಚ್ಚರಿಸಿದ್ದರು. ಈ ಹೇಳಿಕೆ ವಿವಾದದ ಸ್ವರೂಪ ಪಡೆದಿತ್ತು. ಅಲ್ಲದೆ ಪ್ರತಿಪಕ್ಷಗಳು ಈ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಮನೇಕಾ ಗಾಂಧಿ ಅವರನ್ನು ತೀವ್ರ ಟೀಕಿಸಿದ್ದವು.
ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟಿವಿಯಲ್ಲಿ ಬಂದ ವರದಿಗಳನ್ನು ಆಧರಿಸಿ ಸುಲ್ತಾನ್ ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮನೇಕಾಗಾಂಧಿ ಅವರಿಗೆ ಷೋಕಾಸ್ ನೋಟಿಸ್ ನೀಡಿದ್ದಾರೆ. ಅಂತೆಯೇ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ವರದಿ ಕೂಡ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾದ್ಯಮಗಳಿಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶ ಉಪ ಚುನಾವಣಾಧಿಕಾರಿ ಬಿಆರ್ ತಿವಾರಿ ಅವರು, ಮನೇಕಾಗಾಂಧಿ ಅವರ ವಿವಾದಾತ್ಮಕ ಹೇಳಿಕೆಯನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಪ್ರಕರಣ ಸಂಬಂಧ ಸುಲ್ತಾನ್ ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಷೋಕಾಸ್ ನೋಟಿಸ್ ಕೂಡ ಜಾರಿ ಮಾಡಿದ್ದಾರೆ. ಅಲ್ಲದೆ ಈ ಸಂಬಂಧ ಆಯೋಗಕ್ಕೆ ವರದಿ ನೀಡಿದ್ದಾರೆ. ಕೇಂದ್ರ ಆಯೋಗಕ್ಕೆ ವರದಿ ರವಾನೆ ಮಾಡಲಾಗಿದ್ದು, ಅಲ್ಲಿಂದ ಸೂಚನೆ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!